ಹಲ್ಯಾಳ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಲು ಪ್ರಾರಂಭ

ಅಥಣಿ :ಜು.8: 2023-2024ನೇ ಸಾಲಿನ ಮುಂಗಾರು ಹಂಗಾಮಿಗೆ ಹಲ್ಯಾಳ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸುವ ಹಂಗಾಮಿಗೆ ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಚಾಲನೆ ನೀಡಿದರು,

ಸುಮಾರು ಸಾವಿರಾರು ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲು ಹಲ್ಯಾಳ, ಕರಿಮಸೂತಿ, ಸಾವಳಗಿ ತುಂಗಳ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸಲು ಚಾಲನೆ ದೊರಕಲಿದೆ. ಇದರಿಂದ ಅಥಣಿ ಹಾಗೂ ಜಮಖಂಡಿ ತಾಲೂಕಿನ ರೈತರಿಗೆ ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗಲಿದೆ. ರೈತ ನಾಯಕ ಲಕ್ಷ್ಮಣ ಸವದಿಯವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯು ಸಾಕಾರಗೊಂಡಿದ್ದು, ಪ್ರತಿ ವರ್ಷ ಕಾಲುವೆಗಳಿಗೆ ನೀರು ಹರಿದು ಬರುತ್ತಿದ್ದು, ರೈತರು ಹಲವಾರು ಬೆಳೆಗಳನ್ನು ಬೆಳೆದು, ಆರ್ಥಿಕವಾಗಿ ಮೇಲೆ ಬರಲು ಸಾಧ್ಯವಾಗಿದೆ.