ಹಳೆ ಪಿಂಚಣಿ ಜಾರಿಗಾಗಿ ಡಿಕೆಶಿಗೆ ವಿವಿಧ ಸಂಘಟನೆಗಳಿಂದ ಮನವಿ ಸಲ್ಲಿಕೆ

ಆಲಮಟ್ಟಿ :ಜೂ.13: ನೌಕರರ ಸ್ತರಕ್ಕೆ ಮಾರಕವಾಗಿರುವ ಎನ್ ಪಿ.ಎಸ್ ಕೂಡಲೇ ರದ್ದುಗೊಳಿಸಿ ಈ ಹಿಂದಿನ ಓಪಿಎಸ್ ಯಥಾವತ್ತಾಗಿ ಜಾರಿಗೊಳಿಸಬೇಕೆಂದು ವಿವಿಧ ಸಂಘಟನೆಗಳು ರಾಜ್ಯ ಸರ್ಕಾರವನ್ನು ಒಕ್ಕೊರಲಿನಿಂದ ಒತ್ತಾಯಿಸಿವೆ.
ಕನಾ9ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಎನ್ ಪಿಎಸ್ ನೌಕರರ ಸಂಘಟನೆ ಹಾಗೂ ಇನ್ನಿತರ ಸಂಘಟನೆಗಳ ನೂರಕ್ಕೂ ಹೆಚ್ಚು ಪದಾಧಿಕಾರಿಗಳು ಸೋಮವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿಯಾಗಿ ಎನ್.ಪಿಎಸ್ ರದ್ದತಿ ಹಾಗೂ ಓಪಿಎಸ್ ಜಾರಿ ಕುರಿತು ಮನವಿಯೊಂದನ್ನು ಸಲ್ಲಿಸಿದರು. ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಸಕಾ9ರ ಓಪಿಎಸ್ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಎನ್ ಪಿಎಸ್ ರದ್ದತಿಗಾಗಿ ನಡೆದಿರುವ ಹಲವಾರು ಸಭೆಗಳು,ವಿಭಿನ್ನ ಹೋರಾಟ,ಅಭಿಯಾನಗಳ ವಿವರಣೆ, ಓಪಿಎಸ್ ಇಲ್ಲದೇ ನಿವೃತ್ತಿಗೊಳ್ಳುವ ನೌಕರರಿಗೆ ಉಂಟಾಗುವ ಇತರೆ ಸಮಸ್ಯೆಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿ ಅವರಿಗೆ ಸಂಘಟನೆಗಳ ಮುಖಂಡರು ಈ ವೇಳೆ ಮನವರಿಕೆ ಮಾಡಿಕೊಟ್ಟರು.
ಸಂಘಟನೆಗಳ ಪ್ರಮುಖರ ಮಾತುಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಲಿಸಿದ್ದಾರೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೇವೆ. ಪ್ರಣಾಳಿಕೆಯಲ್ಲಿ ನುಡಿದಂತೆ ನಡೆಯುತ್ತೆವೆ ಎಂದಿದ್ದಾರೆ. ನಮ್ಮ ಎಲ್ಲ ನೌಕರರ ಹೋರಾಟ ಶ್ರಮದ ಬಗ್ಗೆ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದೆ. ಭವಿಷ್ಯದಲ್ಲಿ ಎನ್ ಪಿಎಸ್ ನ್ನು ರದ್ದುಗೊಳಿಸಿ ಓಪಿಎಸ್ ನ್ನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಹಾಗೂ ಆಥಿ9ಕ ಇಲಾಖೆಯ ಅಧಿಕಾರಿಗಳ ಜೊತೆ ಚಚಿ9ಸಲಾಗುವುದು ಅಲ್ಲದೇ ಸಚಿವ ಸಂಪುಟದಲ್ಲಿ ಕೂಡ ನ್ಯಾಯ ದೊರಕಿಸಿಕೊಡಲಾಗುವುದು,ಎಲ್ಲ ಸಂಘಟನೆಗಳ ಪದಾಧಿಕಾರಿಗಳನ್ನು ಕರೆದು ಚಚಿ9ಸಿ ಸಕಾರಾತ್ಮಕವಾಗಿರುವಂಥ ಸೂಕ್ತ ತೀಮಾ9ನ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ ಭೇಟಿಯಾದ ಸಂಘಟನೆಯ ಮುಖಂಡರಿಗೆ ಭರವಸೆ ನೀಡಿದ್ದಾರೆಂದು ಕನಾ9ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಪತ್ರಿಕೆಗೆ ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿಗಳ ಜೊತೆ ಸೋಮವಾರ ನಡೆದ ಮಹತ್ವದ ಸಭೆಯಲ್ಲಿ ಕನಾ9ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ, ಎನ್ ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಪದವಿಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ, ನೌಕರರ ಸಂಘದ ಮುಖಂಡರಾದ ಶಿವರುದ್ರಯ್ಯ, ವಿಜಯನಗರ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪ, ನೌಕರರ ನಾಯಕರಾದ ಪಾಷಾ,ಸೋಮಶೇಖರ, ರಂಗನಾಥ, ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು, ಎನ್ ಪಿಎಸ್ ನೌಕರರ ಸಂಘಟನೆಯ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಶಿಕ್ಷಕರ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.