ಹಳೆ ವಿದ್ಯಾರ್ಥಿಗಳಿಂದ ಸಿದ್ಧಗಂಗಾ ಶ್ರೀಗಳ  ಜನ್ಮದಿನೋತ್ಸವ ಆಚರಣೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಏ.12: ತಾಲ್ಲೂಕಿನ ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಹಾಗೂ ಶ್ರೀ ಸಿದ್ಧಗಂಗಾ ಭಕ್ತ ಬಳಗದಿಂದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳ 116ನೇ ಜನ್ಮದಿನೋತ್ಸವವನ್ನು ಆಚರಿಸಿದರು.
 ನಗರದ ನೇತಾಜಿ ವ್ಯಾಯಮ ಶಾಲೆಯ ಆವರಣದಲ್ಲಿ ಮಂಗಳವಾರ ನಡೆದ  ಡಾ.ಶಿವಕುಮಾರ ಸ್ವಾಮೀಜಿಗಳ 116ನೇ ಜನ್ಮದಿನೋತ್ಸವದಲ್ಲಿ ಶ್ರೀ ಶಿವಕುಮಾರ ಶ್ರೀಗಳ ಭಾವಚಿತ್ರಕ್ಕೆ ಬಸವ ಮಠದ ಪೀಠಾಧಿಪತಿ ಬಸವಭೂಷಣ ಸ್ವಾಮಿ ಪುಷ್ಪಾರ್ಚನೆ ಮಾಡಿದ್ದರು.
 ನಂತರ ಮಾತನಾಡಿದ ಅವರು ಸಿದ್ಧಗಂಗಾ ಕ್ಷೇತ್ರದಲ್ಲಿ ಅಕ್ಷರ ದಾಸೋಹವನ್ನು ಪ್ರಾರಂಭಿಸಿದ ಶ್ರೀಗಳು ಬಡ ಮಕ್ಕಳ ಶೈಕ್ಷಣಿಕ ಕ್ರಾಂತಿಗೆ ಕಾರಣರಾಗಿದಲ್ಲದೆ, ಅನ್ನದಾಸೋಹ, ಧರ್ಮ ಜಾಗೃತಿಯ ಬಸವಣ್ಣನವರ ಕಾಯಕ ತತ್ವಗಳನ್ನು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ಅಲ್ಲಿ ಅಭ್ಯಾಸ ಮಾಡಿದ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ ಎಂದು ಶ್ರೀಗಳ ಸೇವೆಯನ್ನು ಸ್ಮರಿಸಿದರು.
 ಭಕ್ತಾಧಿಗಳಿಗೆ ಅನ್ನದಾಸೋಹ ನಡೆಯಿತು.
 ಕಾರ್ಯಕ್ರಮಕ್ಕೆ ತಾಲ್ಲೂಕಿನ ನೂರಾರು ಭಕ್ತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು