ಹಳೇ ಹಳ್ಳಿ ಗ್ರಾಮದಲ್ಲಿ ಪುನೀತ್ ಪುತ್ಥಳಿ ಅನಾವರಣ

ಕೆ.ಆರ್ ಪುರ,ಮಾ.೧೮- ನಮ್ಮ ಪಕ್ಷದ ಮೂಲ ಮಂತ್ರವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಧ್ಯೇಯದಂತೆ ಎಲ್ಲರನ್ನೂ ಮುನ್ನಡೆಸಿಕೊಂಡು ಕ್ಷೇತ್ರದ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸುತ್ತೇವೆ, ಇದೇ ನಮ್ಮ ಪಕ್ಷದ ವೈಶಿಷ್ಟ್ಯತೆ ಎಂದು ಶಾಸಕ ಅರವಿಂದ ಲಿಂಬಾವಳಿ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರದ ಕಿತ್ತಗನೂರಿನ ಹಳೇಹಳ್ಳಿ ಗ್ರಾಮದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ರವರ ಪುತ್ಥಳಿ ಅನಾವರಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹದೇವಪುರ ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಅನ್ಯ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಬರುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಕೇಂದ್ರ, ರಾಜ್ಯ ಸರ್ಕಾರದ ಜನಪರ ಅಭಿವೃದ್ಧಿ ಕಾರ್ಯಗಳು, ನಮ್ಮ ಕ್ಷೇತ್ರದಲ್ಲಿ ನಾವು ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಬಂದಿರುವ ಎಲ್ಲಾ ಕಾರ್ಯಕರ್ತರಿಗೆ ಸ್ವಾಗತಕೊರಿ, ವಲಸೆ ಮತ್ತು ಮೂಲ ಕಾರ್ಯಕರ್ತರು ಎನ್ನುವ ಭೇದ ನಮ್ಮಲ್ಲಿಲ್ಲ ಎಂದು ಹೇಳಿದರು.
ಮಹದೇವಪುರ ಜನಹಿತ-೩ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ, ಕ್ಷೇತ್ರದಲ್ಲಿ ನಡೆದಿರುವ ಭರಪೂರ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಇದಾಗಿದ್ದು, ಈ ಪುಸ್ತಕವು ಕ್ಷೇತ್ರದ ಎಲ್ಲೆಡೆ ತಲುಪಿಸಿ ಜನರಿಗೆ ನಾವು ನಡೆಸಿರುವ ಅಪಾರ ಜನೋಪಯೋಗಿ ಕೆಲಸಗಳನ್ನು ಮನವರಿಕೆ ಮಾಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಇದೇ ವೇಳೆ ಕಾಂಗ್ರೆಸ್ ಹಾಗೂ ಇತರೇ ಪಕ್ಷದ ೧೫೦ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆಗೊಂಡರು.
ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಬಿ.ಎನ್.ನಟರಾಜ್, ಬಿದರಹಳ್ಳಿ ಗ್ರಾ.ಪ ಅಧ್ಯಕ್ಷ ರಾಜೇಶ್, ಮುಖಂಡರಾದ ಗಣೇಶ್, ಕೆಂಪೇಗೌಡ, ಕೆ.ವಿ. ನಾಗರಾಜ್, ಭಾಗ್ಯಮ್ಮ ಸತೀಶ್,ಅಂತೋಣಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.