ಹಳ್ಳದಲ್ಲಿ ಕೊಚ್ಚಿಹೋದ ರೈತ:ಶವವಿಟ್ಟು ಪ್ರತಿಭಟನೆ


ಸಂಜೆವಾಣಿ ವಾರ್ತೆ
ಹೊಸಪೇಟೆ, ಆ.03: ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವಿಗೀಡಾದ ರೈತನ ಕುಟುಂಬಸ್ಥರು ಜಿ.ನಾಗಲಾಪುರ ಗ್ರಾಮ ಪಂಚಾಯಿತಿ ಎದುರು ಮೃತ ರೈತನ ಶವವಿಟ್ಟು ಮಂಗಳವಾರ ಪ್ರತಿಭಟನೆ ನಡೆಸಿದರು.
ಜಿ.ನಾಗಲಾಪುರ ರೈತರು, ಗ್ರಾಮದಿಂದ ಹೊಲ-ಗದ್ದೆಗಳಿಗೆ ತೆಳಲು ಹಳ್ಳ ದಾಟಿಕೊಂಡು ಹೋಗುವ ಪರಿಸ್ಥಿತಿ ಇದೆ. ಹಳ್ಳದ ದಾರಿಯಲ್ಲಿ ರೈತ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಹಳ್ಳದಲ್ಲಿ ರೈತ ಕೊಚ್ಚಿಹೋಗಿ ಸಾವನಪ್ಪಿದ್ದಾರೆ. ಇದಕ್ಕೆ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಗ್ರಾಮಸ್ಥರು, ಆಕ್ರೋಶ ವ್ಯಕ್ತಪಡಿಸಿದರು.
ರೈತರು ಹೊಲ-ಗದ್ದೆಗಳಿಗೆ ತೆರಳಲು ಮೇಲ್ಸುತುವೆ ನಿರ್ಮಾಣಕ್ಕೆ ಗ್ರಾಮ ಪಂಚಾಯ್ತಿ 2.5ಕೋಟಿ ರೂ ಯೋಜನೆ ಸಿದ್ಧ ಪಡಿಸಿದ್ದರೂ  ಕಾಮಗಾರಿಗೆ ವಿಳಂಬದಿಂದ ಈ ಅವಘಡ ನಡೆಯಲು ಕಾರಣವಾಗಿದೆ. ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಹೊಸಪೇಟೆ ಸಹಾಯಕ ಆಯುಕ್ತರಾದ ಸಿದ್ದರಾಮೇಶ್ವರ ಹಾಗೂ ತಹಶೀಲ್ದಾರ್ ವಿಶ್ವಜೀತ್ ಮೆಹಾತ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸ್ವಾಂತನ ಹೇಳಿ, ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.