ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ

ಸಂಜೆವಾಣಿ ವಾರ್ತೆ

ಶಿವಮೊಗ್ಗ, ಜು.20: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿಜಿ.ಕೆ.ಮಿಥುನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಪೊಲೀಸ್ ಇಲಾಖೆಯಿಂದಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲಿಯೂ, ಯುವಕರನ್ನೊಳಗೊಂಡ ಯುವ ಪಡೆ ರಚಿಸಲಾಗಿದೆ.ಸದರಿ ಪಡೆಯು ಗ್ರಾಮಗಳಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಪೊಲೀಸ್
ಇಲಾಖೆಗೆ ಮಾಹಿತಿ ನೀಡಲಿದೆ. ಜೊತೆಗೆ ಆಯಾ ಗ್ರಾಮಗಳಲ್ಲಿ ನೆರವಿನ ಅಗತ್ಯವಿರುವವರಿಗೆಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ.ಈಗಾಗಲೇ ಪೊಲೀಸ್ ಇಲಾಖೆಯು, ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಪಾಲನೆ ಕುರಿತಂತೆನಿರಂತರವಾಗಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿಕೊಂಡು ಬರುತ್ತಿದೆ. ಆನಂದಪುರದ ಪ್ರಮುಖರಸ್ತೆಗಳಲ್ಲಿ ವಾಹನಗಳ ದಟ್ಟಣೆ  ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಅಗತ್ಯ ಕ್ರಮಕೈಗೊಳ್ಳಲಿದೆ ಎಂದರು.ಕಾನೂನು ರೀತ್ಯ ಯಾರೇ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದಾಗ ಅದನ್ನುದಾಖಲಿಸಿಕೊಳ್ಳಲಾಗುತ್ತದೆ. ನಂತರ ಪ್ರಕರಣದ ತನಿಖೆಯ ವೇಳೆಕಂಡುಬರುವ ಅಂಶಗಳ ಆಧಾರದಮೇಲೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಲಾಗುತ್ತದೆ ಎಂದು ದೂರಿಗೆ ಪ್ರತಿದೂರುದಾಖಲಾಗುತ್ತಿರುವ ಕುರಿತಂತೆ ಸಾರ್ವಜನಿಕರ ಪ್ರಶ್ನೆಗಳಿಗೆ ಜಿಲ್ಲಾ ರಕ್ಷಣಾಧಿಕಾರಿಗಳು
ಪ್ರತಿಕ್ರಿಯೆ ನೀಡಿದ್ದಾರೆ.ಸಭೆಯಲ್ಲಿ ಸಾಗರ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಸಾಗರಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಪ್ರವೀಣ್, ಆನಂದಪುರ ಪೊಲೀಸ್ ಠಾಣೆ ಸಬ್ಇನ್ಸ್’ಪೆಕ್ಟರ್ ಯುವರಾಜ್ ಉಪಸ್ಥಿತರಿದ್ದರು.