ಹಳ್ಳಿಗಳು ಸ್ವಚ್ಚವಾಗಿದ್ದರೆ ದೇಶ ಸ್ವಚ್ಚ

ಹೊನ್ನಾಳಿ.ಮಾ.೨೯ ; ಸುಂದರ ಪರಿಸರ ನಿರ್ಮಾಣ ಮಾಡುವುದು ಗ್ರಾಮಪಂಚಾಯಿತಿ ಸಿಬ್ಬಂದಿಗಳ ಕೆಲಸ ಮಾತ್ರವಲ್ಲಾ, ಪ್ರತಿಯೊಬ್ಬರೂ ನಿರ್ಮಲ ಪರಿಸರ ನಿರ್ಮಾಣ ಮಾಡಲು ಕೈಜೋಡಿಸ ಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕುಂದೂರು,ನೇರಲಗುಂಡಿ ಗ್ರಾಮಗಳಲ್ಲಿ 26.97 ಲಕ್ಷ ವೆಚ್ಚದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.ಹಳ್ಳಿಗಳು ಪರಿಸರ ಸುಂದರವಾಗಿರ ಬೇಕೆಂದರೆ ಅದಕ್ಕೆ ಗ್ರಾಮಪಂಚಾಯಿತಿ ಸಿಬ್ಬಂದಿಗಳಿAದ ಮಾತ್ರ ಸಾಧ್ಯವಿಲ್ಲಾ, ಗ್ರಾಮದ ಪ್ರತಿಯೊಬ್ಬರೂ ಸುಂದರ ಪರಿಸರ ನಿರ್ಮಾಣ ಮಾಡಲು ಕೈಜೋಡಿಸ ಬೇಕೆಂದು ಕರೆ ನೀಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಸ್ವತಃ ಪೊರಕೆ ಹಿಡಿದು ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.ಅದೇ ರೀತಿ ನಾನು ಕೂಡ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲೂ ಸ್ವಚ್ಚಭಾರತ್ ಆಂದೋಲನ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಹಳ್ಳಿಹಳ್ಳಿಗಳಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಾಣ ಮಾಡುತ್ತಿದ್ದು ಜನರು ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ತಮ್ಮ ಮನೆಯ ಸುತ್ತಲಿನ ಪರಿಸರ ಹಾಗೂ ಗ್ರಾಮಗಳನ್ನು ಸ್ವಚ್ಚವಾಗಿಡಲು ಮುಂದಾಗ ಬೇಕೆಂದು ಕರೆ ನೀಡಿದರು.ಹಳ್ಳಿಗಳು ಸ್ವಚ್ಚವಾಗಿದ್ದರೇ ದೇಶ ಸ್ವಚ್ಚವಾಗಿರುತ್ತದೇ ಎಂದು ನಂಬಿದವನು ನಾನು ಈ ಹಿನ್ನೆಲೆಯಲ್ಲಿ ಜನರು ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡ ಬೇಕೆಂದರು.ವಿವಿಧ ಕಾಮಗಾರಿಗಳ ಉದ್ಘಾಟನೆ ಗುದ್ದಲಿಪೂಜೆ :ಕುಂದರೂ ಗ್ರಾಮದಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಉದ್ಘಾಟಿಸಿದ ಶಾಸಕರು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲೂ ಸಿಸಿ ರಸ್ತೆ ನಿರ್ಮಾಣ ಮಾಡುವ ಮೂಲಕ ಅವಳಿ ತಾಲೂಕುಗಳನ್ನು ಧೂಳು ಮುಕ್ತ ಮಾಡಿದ್ದೇನೆ ಎಂದರು,ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಸದಸ್ಯರಾದ ದೀಪಾಜಗದೀಶ್, ತಾಲೂಕು ಪಣಚಾಯಿತಿ ಸದಸ್ಯರಾದ ತಿಪ್ಪೇಶ್, ಗ್ರಾಮಪಂಚಾಯಿತಿ ಅದ್ಯಕ್ಷರಾದ ಬಿ,ಚಿದಾನಂದ, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಗ್ರಾಮದ ಮುಖಂಡರು ವಿವಿಧ ಇಲಾಖೆ ಅಧಿಕಾರಿಗಳಿದ್ದರು.