ಹಳ್ಳಿ ಸೊಗಡಿನ ಚಿತ್ರ `ಕೆರೆಬೇಟೆ’  ತೆರೆಗೆ ಸಜ್ಜು

ಅಪ್ಪಟ ಹಳ್ಳಿ ಸೊಗಡಿನ  ಕಥೆ ಆಧರಿಸಿದ ” ಕೆರೆ ಬೇಟೆ ” ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಮಲೆನಾಡು ಭಾಗದ  ಮೀನು ಬೇಟೆಯ ಸಂಸ್ಕೃತಿ ಸುತ್ತ ಚಿತ್ರದ ಕಥೆ ಸಾಗಿದೆ.

ಮುಂದಿನವಾರ ಚಿತ್ರ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕ ಅರಗ ಜ್ಞಾನೇಂದ್ರ ಮತ್ತಿತರರು ಟೈಟಲ್ ಟ್ರಾಕ್ ಬಿಡುಗಡೆ ಮಾಡಿ ನಟ ಗೌರಿ ಶಂಕರ್ ಅವರ ಪ್ರಯತ್ನ ಯಶಸ್ವಿಯಾಗಲಿ ಎಂದು ಮನದುಂಬಿ ಹಾರೈಸಿದ್ದಾರೆ.

ಕೆರಿಬ್ಯಾಟಿ ಶುರುವಾತು…’ ಎನ್ನುವ ಟೈಟಲ್ ಟ್ರ್ಯಾಕ್ ಅನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ, ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದು ಕರಿಬಸವ ತಡಕಲ್ ಹಾಡಿಗೆ ಧ್ವನಿ ನೀಡಿದ್ದಾರೆ. 

ಜನಮನ ಸಿನಿಮಾ ಸಂಸ್ಥೆಯಡಿ  ಕೆರೆಬೇಟೆ ಚಿತ್ರ ನಿರ್ಮಾಣವಾಗಿದ್ದು ರಾಜಹಂಸ ಚಿತ್ರದ ಬಳಿಕ ನಟ ಗೌರಿ ಶಂಕರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಚಿತ್ರದ ಬಗ್ಗೆ ಒಂದಷ್ಟು ‌ಕುತೂಹಲ ಮತ್ತು ನಿರೀಕ್ಷೆ ಹೆಚ್ಚಾಗಿದೆ.

ಗೌರಿಶಂಕರ್ ನಟನೆಯ ಚಿತ್ರಕ್ಕೆ ರಾಜ್ ಗುರು ನಿರ್ದೇಶನ ಮಾಡಿದ್ದಾರೆ.  ಚಿತ್ರದ ಟ್ರೈಲರ್,  ಟೀಸರ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ಬಿಡುಗಡೆ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ.

ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿ ಮಾತನಾಡಿದ ಬಿ ವೈ ರಾಘವೇಂದ್ರ,  ‘ಸಿನಿಮಾ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತವೇ ಚಿತ್ರೀಕರಣಗೊಂಡಿದೆ. ಜೊತೆಗೆ ಮಲೆನಾಡಿನವರೇ ಸೇರಿ ಸಿನಿಮಾ ಮಾಡಿದ್ದಾರೆ. ಮಲೆನಾಡಿನ ಸೌಂದರ್ಯವನ್ನು ತುಂಬಾ ಸುಂದರವಾಗಿ ತೋರಿಸಲಾಗಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಆರಗ ಜ್ಞಾನೇಂದ್ರ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಸಂಸ್ಕೃತಿಗಳು ಕಣ್ಮರೆಯಾಗಿವೆ. ಅನೇಕ ಪದ್ಧತಿಗಳು ಮರೆಯಾಗಿವೆ. ಇದೀಗ ಕೆರೆಬೇಟೆ ಸಂಸ್ಕೃತಿಯ ಬಗ್ಗೆ ಸಿನಿಮಾ ಮಾಡಿರುವುದು ತುಂಬಾ ಖುಷಿ ಆಗುತ್ತೆ. ಟ್ರೈಲರ್ ಮತ್ತು ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ನಾಯಕ ನಟ, ನಿರ್ದೇಶಕ ನಿರ್ಮಾಪಕ ಸೇರಿದಂತೆ ಎಲ್ಲರೂ ಮಲೆನಾಡಿನವರೇ ಎನ್ನುವುದು ಖುಷಿಯ ವಿಚಾರ. ಸಿನಿಮಾ ಎಲ್ಲಾ ಕಡೆ ಹೌಸ್ ಫುಲ್ ಪ್ರದರ್ಶನ ಕಾಣಲಿ’ ಎಂದು ಹಾರೈಸಿದರು.

ಬಾಕ್ಸ್

ಮಲೆನಾಡಿನ ಸಂಸ್ಖೃತಿ ಅನಾವರಣ

ಮಲೆನಾಡಿನ ಸಂಸ್ಕೃತಿಯನ್ನು ತೆರೆಯ ಮೇಲೆ ಕಟ್ಟಿಕೊಡುವ ” ಕೆರೆಬೇಟೆ” ಚಿತ್ರ ಮಾರ್ಚ್ 15ಕ್ಕೆ ರಾಜ್ಯಾದ್ಯಂತ ತೆರೆಗೆ ಬರಲಿದೆ.ನಟ ಗೌರಿ ಶಂಕರ್ ಅಪಾರ ಕನಸು ಮತ್ತು ವಿಶ್ವಾಸವಿಟ್ಟು ಕಷ್ಟಪಟ್ಟು ಮಾಡಿರುವ ಸಿನಿಮಾ ಇದು.ಈಗಾಗಲೇ ಚಿತ್ರಕ್ಕೆ ಡಾಲಿ ಧನಂಜಯ ಸೇರಿದಂತೆ ಅನೇಕರು ಸಾಥ್ ನೀಡಿ ಶುಭಹಾರೈಸಿದ್ದಾರೆ.