ಹಸಿರು ಕ್ರಾಂತಿಯ ಹರಿಕಾರ, ದೇಶಕ್ಕೆ ನೀಡಿದ ಕೊಡುಗೆ ಅಪಾರ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಸಂಜೆವಾಣಿ ವಾರ್ತೆ

ದಾವಣಗೆರೆ ಏ.೬; ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಜಯಂತಿಯ ಮೂಲಕ ಅವರ ಆದರ್ಶವನ್ನು ನಾವೆಲ್ಲಾ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ.ಎಂ.ವಿ ಹೇಳಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರಪಾಲಿಕೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಡಾ. ಬಾಬು ಜಗಜೀವನ್ ರಾಂ ಅವರ 117ನೇ ಜಯಂತಿಯ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತಾನಾಡಿದರು.  ಡಾ. ಬಾಬು ಜಗಜೀವನ್ ರಾಂ ಅವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪಪ್ರಧಾನಿಯೂ ಆಗಿದ್ದರು. ಜಗಜೀವನ್ ರಾಂ ರವರು ಅಸ್ಪ್ರಶ್ಯತಾ ನಿವಾರಣೆ ಹೋರಾಟದ ಮಹಾನ್ ನಾಯಕರಾಗಿದ್ದರು. ನಮ್ಮ ದೇಶಕ್ಕೆ ತನ್ನದೇ ಆದ ಪ್ರಾಮಾಣಿಕ ಸೇವೆ ಸಲ್ಲಿಸಿ 50 ವರ್ಷಗಳ ಕಾಲ ದೇಶ ಸೇವೆ ಮಾಡಿದವರು.1971ರಲ್ಲಿ ಪಾಕಿಸ್ತಾನದ ವಿರುದ್ದದ ಯುದ್ದದ ಸಮಯದಲ್ಲಿ ಕೇಂದ್ರ ರಕ್ಷಣಾ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಭಾರತ-ಪಾಕಿಸ್ತಾನ ಯುದ್ದದಲ್ಲಿ ದಿಗ್ವಿಜಯ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹಲವು ಇಲಾಖೆಗಳಲ್ಲಿ ಅವರದೇ ಆದ ಚಾಪು ಮೂಡಿಸಿದ್ದಾರೆ. ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಇಂಡೋ-ಪಾಕ್ ಯುದ್ದದ ಸಂದರ್ಭದಲ್ಲಿ ದೇಶಕ್ಕೆ ಅವರ ಕೊಡುಗೆ ಗಣನೀಯವಾದದ್ದು, ಅವರ ಹಾದಿಯಲ್ಲಿ ನಾವೆಲ್ಲರು ಸಾಗಿ ಶೋಷಿತ ವರ್ಗದ ಜನರಿಗೆ ಸಹಾಯ ಮಾಡಬೇಕಿದೆ. ಇವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆಯೋಣ ಎಂದರು.ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಪ್ರಾಸ್ತ್ತಾವಿಕ ನುಡಿಗಳಾನ್ನಾಡಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ನಾಗರಾಜ, ಬಿಸಿಎಂ ಅಧಿಕಾರಿ ಗಾಯತ್ರಿ, ಪರಿಶಿಷ್ಟ ವರ್ಗಗಳ ಅಧಿಕಾರಿ ಬೇಬಿ ಸುನೀತಾ ದಲಿತ ಸಮಾಜ ಮುಖಂಡರು ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.