ಹಸಿರು ರಾಯಚೂರು ಯೋಜನೆಗೆ ಜಿ.ಪಂ. ಸಿಇಒರಿಂದ ಚಾಲನೆ


ರಾಯಚೂರು, ಜೂ.೬- ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಯಚೂರು ತಾಲೂಕಿನ ಶಾಕವಾದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಂಕೇತಿಕವಾಗಿ ಸಸಿ ನೆಡುವ ಮೂಲಕ ಹಸಿರು ರಾಯಚೂರು ಯೋಜನೆಗೆ ಚಾಲನೆ ನೀಡಿದರು.
ಈ ವರ್ಷದ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಒಟ್ಟು ೧೦ ಲಕ್ಷ ಅರಣ್ಯ ಅಥವಾ ತೋಟಗಾರಿಕೆ ಸಸಿಗಳನ್ನು ನೆಡುವ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.
ಸಸಿ-ಗಿಡಗಳನ್ನು ಬೆಳೆಸುವುದು ಹಾಗೂ ಸಂರಕ್ಷಣೆ ಮಾಡುವುದು ಎಲ್ಲರ ಜವಬ್ದಾರಿಯಾಗಿದೆ, ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದೆ ಸಸಿಗಳನ್ನು ಬೆಳೆಸುವಂತೆ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಚಂದ್ರಬಂಡಾ ಗ್ರಾಮದ ಗ್ರಾಮ ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಡಿಆರ್.ಡಿ.ಎ ಯೋಜನಾ ನಿರ್ದೇಶಕರು, ತಾಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಹಾಗೂ ಪಿಡಿಒ ಸೇರಿದಂತೆ ಗ್ರಾಮಸ್ಥರಿದ್ದರು.