ಹಾಡುಹಗಲೇ ಬಸ್ ಕಂಡಕ್ಟರ್ ಬರ್ಬರ ಕೊಲೆ

ಕಲಬುರಗಿ,ಮೇ.11-ನಗರದ ಸೂಪರ್ ಮಾರ್ಕೆಟ್‍ನ ಸಿಟಿ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಒಬ್ಬರನ್ನು ಮಚ್ಚಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೊಲೆಯಾದ ಬಸ್ ಕಂಡಕ್ಟರ್‍ನನ್ನು ಸ್ವಾಮಿ (45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನವೇ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಹಾಡುಹಗಲೇ ನಡೆದ ಈ ಭೀಕರ ಕೊಲೆಯಿಂದ ಸಿಟಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಕುಳಿತಿದ್ದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ.
ಸಹೋದರರ ನಡುವಿನ ವೈಷಮ್ಯವೇ ಕೊಲೆಗೆ ಕಾರಣವೆನ್ನಲಾಗುತ್ತಿದೆ. ಸುದ್ದಿ ತಿಳಿದು ಬ್ರಹ್ಮುಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.