ಹಾರಕೂಡ ಶ್ರೀಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಮರ್ಪಣೆ

Oplus_131072

ಬೀದರ್: ಏ.15:ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡ ಸಂಸ್ಥಾನ ಹಿರೇಮಠದ ದಾಸೋಹ ಮನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 133 ನೇ ಜಯಂತಿ ಮಹೋತ್ಸವದ ಅಂಗವಾಗಿ ಪೀಠಾಧಿಪತಿಗಳಾದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಮರ್ಪಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಗುದಗೆ, ಮಲ್ಲಿನಾಥ ಹಿರೇಮಠ, ಪಂಚಾಕ್ಷರಿ ಹಿರೇಮಠ, ಪಂಡಿತ ಪೂಜಾರಿ ಉಪಸ್ಥಿತರಿದ್ದರು.