ಹಾರರ್ ‘ಪ್ರೇತ’ ಆಡಿಯೋ ಬಿಡುಗಡೆ

“ಪ್ರೇತ” ಚಿತ್ರದ ಮೂಲಕ ನಟ  ಹರೀಶ್ ರಾಜ್ ನಿರ್ದೇಶಕನಾಗಿದ್ದಾರೆ. ಇದೀಗ ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು ಸಚಿವ ಬೈರತಿ ಸುರೇಶ್ ಬಿಡುಗಡೆ ಮಾಡಿ ಚಿತ್ರಕ್ಕೆ ಮತ್ತು ತಂಡಕ್ಕೆ ಶುಭ ಹಾರೈಸಿದ್ದಾರೆ

ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಭಾವುಕ ಗೀತೆಗೆ ನವೀನ್ ಸಜ್ಜು ಧ್ವನಿಯಾಗಿದ್ದು, ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತವಿದೆ. ನಾಯಕ ನಾಯಕಿಯಾಗಿ ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡಿದ್ದು ಕೇಳುಗರ ಗಮನ ಸೆಳೆದಿದೆ

ನಟನೆ, ನಿರ್ದೇಶನದ ಜೊತೆ ಹರೀಶ್ ರಾಜ್  ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. “ಪ್ರೇತ” ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿಬರುತ್ತಿದೆ. ವಿರಾಜಪೇಟೆ ಮತ್ತು ಮಡಿಕೇರಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

`ಪ್ರೇತ’ ಒಂದು ಹಾರರ್ ಕಥೆಯುಳ್ಳ ಸಿನಿಮಾ. ಹರೀಶ್ ರಾಜ್ ಜೊತೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ, ಬಿ.ಎಂ. ವೆಂಕಟೇಶ್, ಅಮಿತ್ ಪಾತ್ರವರ್ಗದಲ್ಲಿ ಇದ್ದಾರೆ. ಕಿರಣ್ ಆರ್. ಹೆಮ್ಮಿಗೆ ಸಂಭಾಷಣೆ,ಶಿವಶಂಕರ್ ಛಾಯಾಗ್ರಹಣ, ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ ಈ ಚಿತ್ರಕ್ಕಿದೆ.