
ಬೆಂಗಳೂರು, ಜ.5- ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕಾರ್ಖಾನೆ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಶಕ್ತಿ ಅಕ್ಯುಮಲೇಟರ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿಯಲ್ಲಿದ್ದ ಹಲವು ಬ್ಯಾಟರಿ ಸ್ಫೋಟಗೊಳ್ಳುತ್ತಿವೆ ಎಂದು ತಿಳಿದುಬಂದಿದೆ.

ಕಾರ್ಖಾನೆ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧ ಹೇರಲಾಗಿದೆ.
ಇನ್ನು, ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಮಿಕರು ಕಾರ್ಖಾನೆಯಿಂದ ಹೊರ ಬಂದಿದ್ದಾರೆ. ಹೀಗಾಗಿ, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಈ ನಡುವೆ, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.