ಹಾಲಿನ ದರ ಏರಿಕೆ ನಿರ್ಧಾರ ಕೈಗೊಂಡಿಲ್ಲ:ಸಿಎಂ

ಬೆಂಗಳೂರು, ನ.21- ಹಾಲಿನ ದರ ಏರಿಕೆ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ದರ ಏರಿಕೆ ಸಂಬಂಧ ಇಂದು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಹಾಲು ಮಂಡಳಿಯೇ ಈ ಕುರಿತು ತೀರ್ಮಾನಿಸಬಹುದು ಎಂದರು.
ರೈತರು ಮತ್ತು ಗ್ರಾಹಕರ ಹಿತ ಕಾಪಾಡಿ ಯಾರಿಗೂ ಅನ್ಯಾಯವಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದರು.
ನೆರೆ ರಾಜ್ಯಗಳ ಹಾಲಿನ ದರಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಆದರೆ ರೈತರಿಗೆ ಯಾವುದೇ ಸಮಸ್ಯೆ ಆಗಬಾರದು ಎಂದು ಹೇಳಿರುವುದಾಗಿ ಸ್ಪಷ್ಟಪಡಿಸಿದರು.
ಮೂಲಗಳ ಪ್ರಕಾರ ಕರ್ನಾಟಕ ಹಾಲು ಮಹಾಮಂಡಳ ಒಂದೆರಡು ದಿನಗಳಲ್ಲಿ ಸಭೆ ನಡೆಸಿ ಹಾಲು ದರ ಏರಿಕೆ ಕುರಿತು ನಿರ್ದಾರ ಕೈಗೊಳ್ಳುವ ನಿರೀಕ್ಷೆಯಿದೆ.