ಹಾಲು ಒಕ್ಕೂಟ ಮಹಾಮಂಡಲ: ಜಿಟಿಡಿ ಬಣ ಜಯಭೇರಿ

rpt

ಮೈಸೂರು.ಮಾ. 31- ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಮಾಜಿ ಸಚಿವರು ಹಾಗೂ ಸಹಕಾರಿ ದುರೀಣರಾದ ಜಿ.ಟಿ. ದೇವೇಗೌಡರ ನೇತೃತ್ವದಲ್ಲಿ ಇತ್ತಿಚೆಗೆ ನಡೆದ ಮೈಸೂರು ಜಿಲ್ಲಾ ಹಾಲು ಒಕ್ಕೂಟ ಹಾಗೂ ರಾಜ್ಯ ಸಹಕಾರ ಮಹಾಮಂಡಲದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ತಾ.ಪಂ. ಮಾಜಿ ಸದಸ್ಯ, ಉಮ್ಮತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಉಮ್ಮತ್ತೂರು ನಾಗೇಶ್ ಮೈಸೂರಿನಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಶುಭಾಶಯ ಕೋರಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ಜಿ.ಟಿ. ದೇವೇಗೌಡರು ಅತ್ಯಂತ ಹಿರಿಯ ರಾಜಕಾರಣಿ, ಸಹಕಾರಿ ಕ್ಷೇತ್ರದ ಮೂಲಕ ಜನ ಸೇವೆ ಮಾಡುತ್ತಾ ಎಲ್ಲಾ ವರ್ಗದವರಿಗೂ ಸವಲತ್ತುಗಳನ್ನು ಕಲ್ಪಿಸುವ ಮೂಲಕ ಎಲ್ಲರನ್ನು ಒಗ್ಗಟ್ಟಿನಿಂದ ಕೊಂಡ್ಯೊಯುವ ಗುಣವನ್ನು ಬೆಳೆಸಿಕೊಂಡಿದ್ದಾರೆ. ಇತ್ತೀಚೆಗೆ ಇವರ ನೇತೃತ್ವದಲ್ಲಿ ನಡೆದಂತಹ ಬಹಳಷ್ಟು ಸಹಕಾರಿ ಸಂಸ್ಥೆಗಳಲ್ಲಿ ಚುನಾವಣೆಯಲ್ಲಿ ಆಡಳಿತ ಮಂಡಲಿಗೆ ತಮ್ಮದೇ ಬೆಂಬಲಿಗರನ್ನು ಆಯ್ಕೆ ಮಾಡಿ ಕಳುಹಿಸುವ ಮೂಲಕ ಸಹಕಾರ ಕ್ಷೇತ್ರದಲ್ಲಿ ತಮ್ಮ ಹಿಡಿತ ಮತ್ತು ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯ ಮತ್ತು ಹಳೇ ಮೈಸೂರು ಪ್ರಾಂತ್ಯದಲ್ಲಿ ತಮ್ಮದೇ ಸಂಘಟನೆಯನ್ನು ಬೆಳೆಸಿಕೊಂಡು ಸಹಕಾರಿ ಕ್ಷೇತ್ರದ ಬಲವರ್ಧನೆ ಜೊತೆಗೆ ಯುವಕರು ಸಹಕಾರಿ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡಿದ ಕೀರ್ತಿ ದೇವೇಗೌಡರಿಗೆ ಸಲ್ಲುತ್ತದೆ. ಅವರ ಅಪಾರ ಶ್ರಮ ಮತ್ತು ಅನುಭವದಿಂದ ಸಹಕಾರ ಕ್ಷೇತ್ರದ ಹಳೇ ಮೈಸೂರು ಭಾಗದಲ್ಲಿ ಇನ್ನು ಹೆಚ್ಚಿನ ಮಟ್ಟದಲ್ಲಿ ಬೆಳೆಯಲಿ ಎಂದು ಉಮ್ಮತ್ತೂರು ನಾಗೇಶ್ ಶುಭ ಕೋರಿದರು.
ಈ ಸಂದರ್ಭದಲ್ಲಿ ಪಿರಿಯಾಪಟ್ಟಣದ ಶಾಸಕ ಮಹದೇವ್, ಚಾ.ನಗರ ಜಿ.ಪಂ. ಸದಸ್ಯ ಆರ್. ಬಾಲರಾಜು, ಲಲಿತಾದೇವೇಗೌಡ, ಆಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ. ಹರೀಶ್‍ಗೌಡ ಮೊದಲಾದವರು ಇದ್ದರು.