ಹಾಳಕೇರಿ ಗ್ರಾಮದಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮ


ಗದಗ, ನ 11: ಗಜೇಂದ್ರಗಡ ತಾಲೂಕಿನ ಹಾಳಕೇರಿ ಗ್ರಾಮದಲ್ಲಿ ಮುಪ್ಪಿನ ಬಸವಲಿಂಗದೇವರ ನಿರಂಜನಚರ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಭಾಗವಹಿಸಿದರು. ಸದರಿ ಕಾರ್ಯಕ್ರಮ ಪ್ರಯುಕ್ತ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹಾಳಕೇರಿ ಜಾತ್ರೆಯಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಯಿತು. ಸಾರ್ವಜನಿಕರಿಗೆ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮದಡಿಯಲ್ಲಿ 326 ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಭಾರಿ ಡಾ|| ಜಗದೀಶ ನುಚ್ಚಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಭಾಗವಹಿಸಿ ಚಿಕಿತ್ಸಾ ಕೇಂದ್ರಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ಮಾಡಿದರು. ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ ಕ್ಲೋರಿನೇಶನ್ ಮಾಡಲು ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಿದರು. ರೋಣ ತಾಲೂಕಾ ವೈದ್ಯಾಧಿಕಾರಿಗಳಾದ ಡಾ|| ಬಿ. ಎಸ್. ಭಜಂತ್ರಿ ಹಾಜರಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಸಿ. ಚವ್ಹಾಣ ಸ್ವಚ್ಛತೆ ಬಗ್ಗೆ ಮೇಲ್ವಿಚಾರಣೆ ಮಾಡಿದರು ಹಾಗೂ ಕೋವಿಡ್-19 ಲಸಿಕೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಉಪ ಆರೊಗ್ಯ ಶಿಕ್ಷಣಾಧಿಕಾರಿಗಳಾದ ಉಮೇಶ ಕರಮುಡಿ, ಶ್ರೀಮತಿ ಗೀತಾ ಕಾಂಬಳೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಿಂಗನಗೌಡ ಪಾಟೀಲ,ಕಾರ್ಯಕ್ರಮ ಸಂಯೋಜಕರಾದ || ರವಿ ಕಡಗಾವಿ, ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.