ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ಶೀಘ್ರ ದಿನಾಂಕ ನಿಗದಿ

ಹಾವೇರಿ, ನ. ೨- ಹಾವೇರಿಯಲ್ಲಿ ಈ ಬಾರಿ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಚಿಂತನೆ ನಡೆಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾಡನಾಡಿದ ಅವರು ಪ್ರಸ್ತುತ ರಾಜ್ಯದಲ್ಲಿ ಕೊರೊನಾ ಸೋಂಕಿತರ ಉಪಟಳ ಹೆಚ್ಚಾಗಿದ್ದು ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾದ ನಂತರ ಸಮ್ಮೇಳನದ ದಿನಾಂಕವನ್ನು ನಿಗದಿ ಪಡಿಸಲಾಗುವುದು.
೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವಾಗ ನಡೆಸಬೇಕು ಎಂಬುದರ ಬಗ್ಗೆ ಸಾಹಿತ್ಯ ಪರಿಷತ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಈ ಸಂಬಂಧ ಮುಖ್ಯಮಂತ್ರಿಗಳ ಆಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ, ಚರ್ಚೆ ನಡೆಸಿದ ನಂತರ ದಿನಾಂಕವನ್ನು ನಿಗದಿ ಪಡಿಸಲಾಗುವುದು ಎಂದು ತಿಳಿಸಿದರು.
ಕಳೆದ ಬಾರಿ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರಗಿ ಜಿಲ್ಲೆಯಲ್ಲಿ ನಡೆಸಲಾಗಿತ್ತು. ಕಳೆದ ಫೆಬ್ರವರಿ ತಿಂಗಳಿನಲ್ಲಿ ನಡೆದ ಸಮ್ಮೇಳವ ಅಧ್ಯಕ್ಷತೆಯನ್ನು ಹಿರಿಯ ಕವಿ ಹೆಚ್.ಎಸ್. ವೆಂಕಟೇಶ ಮೂರ್ತಿ ವಹಿಸಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಕುರಿತ ಸುದ್ಧಿಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು ಯಡಿಯೂರಪ್ಪ ಅವರು ಬಿಜೆಪಿ ಪಕ್ಷದ ಸರ್ವೋಚ್ಚ ನಾಯಕ ಮುಖ್ಯಮಂತ್ರಿಯಾಗಿ ಸಂಪೂu ಅವಧಿ ಪೂರೈಸಲಿದ್ದು, ಮುಂದಿನ ಚುನಾವಣೆಯೂ ಕೂಡ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.