ಹಾವೇರಿ ಪಟಾಕಿ ದುರಂತ ತನಿಖೆಗೆ ಬೊಮ್ಮಾಯಿ ಆಗ್ರಹ

ಬೆಂಗಳೂರು ಆ. ೩೦ – ಹಾವೇರಿ ಜಿಲ್ಲೆಯ ಆಲದಕಟ್ಟೆ ಗ್ರಾಮದ ಪಟಾಕಿ ಗೋದಾಮಿನಲ್ಲಿ ಬೆಂಕಿ ಹೊತ್ತುಕೊಂಡು ನಾಲ್ವರು ಸಜೀವ ದಹನವಾಗಿರುವ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಘಟನೆ ಅತ್ಯಂತ ದುರದೃಷ್ಟಕರ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮೃತ ಕುಟುಂಬ ಸದಸ್ಯರಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.ಇಂತಹ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳು ನಿಗಾವಹಿಸುವುದು ಸೂಕ್ತ. ರಾಜ್ಯದಲ್ಲಿ ಈ ರೀತಿಯ ಪಟಾಕಿ ಸಿಡಿಮದ್ದು ಗೋದಾಮಗಳ ಗ್ಗೆ ಪರಿಶೀಲನೆ ನಡೆಸಿ ಕಾರ್ಮಿಕರಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕರ ಕುಟುಂಬ ಸದಸ್ಯರಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು.
ಲಕ್ಷ ರೂ. ಪರಿಹಾರ
ಬೆಂಕಿ ಅವಘಡದಲ್ಲಿ ಮೃತಪಟ್ಟ ನಾಲ್ವರ ಕುಟುಂಬ ಸದಸ್ಯರಿಗೆ ಬಿಜೆಪಿ ವತಿಯಿಂದ ತಲಾ ೧ ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಹೇಳಿದರು.