ಹಾಸನ ಟಿಕೆಟ್ ನಾಳೆ ಘೋಷಣೆ: ಹೆಚ್‌ಡಿಕೆ

ಚಿಕ್ಕಮಗಳೂರು, ಫೆ. ೨೫- ಹಾಸನ ಟಿಕೆಟ್ ವಿಚಾರ ಕುರಿತಂತೆ ಕಾರ್ಯಕರ್ತರ ಬಳಿ ಚರ್ಚೆ ನಡೆಸಿ, ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಈಗಾಗಲೇ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡ ಬೆನ್ನಲ್ಲೆ ಈ ಹೇಳಿಕೆ ಹೊರಬಿದ್ದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆ ಟಿ-೨೦ ಮ್ಯಾಚ್ ರೀತಿ ಕುತೂಹಲವಿದೆ. ಈ ಸಂಬಂಧ ನಾಳೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಈ ಸಭೆಗೆ ರೇವಣ್ಣ ಅವರನ್ನು ಆಹ್ವಾನಿಸಿಲ್ಲ ಎಂದು ಹೇಳಿದರು.
ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆ ರಾಜ್ಯದ ಜನರಿಗೂ ಅಪಾರ ಕುತೂಹಲವಿದೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರೆಲ್ಲರೂ ನನ್ನ ಕುಟುಂಬ ಸಾಮಾನ್ಯ ಕಾರ್ಯಕರ್ತರನನ್ನು ನಿಲ್ಲಿಸಿ, ಬಿಜೆಪಿಯನ್ನು ಸೋಲಿಸುವುದಾಗಿ ಹೇಳಿದ್ದೆ. ಈ ಹೇಳಿಕೆ ಈಗಲೂ ಬದ್ದನಾಗಿದ್ದೇನೆ. ಕಾರ್ಯಕರ್ತರ ಅಭಿಪ್ರಾಯ ಪಡಲು ಹಾಸನ ಟಿಕೆಟ್ ಪ್ರಕಟಿಸಲಾಗುವುದು ಎಂದರು.
೧೩೦ ಸ್ಥಾನ ಗೆಲ್ಲುತ್ತೇನೆ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೆಜೆಪಿಗೆ ಹೋದ ಸಂದರ್ಭದಲ್ಲಿ ಪ್ರಾಣವಿರುವತನಕ ಬಿಜೆಪಿಗೆ ಮರಳುವುದಿಲ್ಲ ಎಂದಿದ್ದರು. ಈಗ ಜೀವ ಇರುವವರೆಗೂ ಬಿಜೆಪಿಯಲ್ಲಿ ಇರುತ್ತೇನೆ ಎಂದು ಹಿಂದಿನ ವಿಚಾರಗಳನ್ನು ಪ್ರಸ್ತಾಪಿಸದೆ ಯಡಿಯೂರಪ್ಪರನ್ನು ರಾಜಕೀಯ ಇತಿಹಾಸವನ್ನು ಕೆಣಕಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಏನು ಎಂದು ಪ್ರಶ್ನಿಸಿದ ಕುಮಾರಸ್ವಾಮಿ ವಿಮಾನ ನಿಲ್ದಾಣಕ್ಕೆ ಜನರು ಭೂಮಿಗಿಳಿದಿದ್ದಾರೆ. ಆದರೆ ರೈತರಿಗೆ ಪರಿಹಾರ ಹಣ ನೀಡಿಲ್ಲ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಹೇಳಿದರು.
ಇದೇವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ ಬೆಂಗಳೂರು, ಮೈಸೂರು ಹೆದ್ದಾರಿಯನ್ನು ತಾವು ಅಭಿವೃದ್ಧಿ ಮಾಡುದ್ದೇವೆ ಎಂದು ಬಿಂಬಿಸಲು ನರೇಂದ್ರ ಮೋದಿಯವರು ಉದ್ಘಾಟನೆಗೆ ಬರುತ್ತಿದ್ದಾರೆ ಎಂದು ದೂರಿದರು.