ಹಾಸನ ಪೆನ್ ಡ್ರೈವ್ ಪ್ರಕರಣ: ಡಿಕೆಶಿ ಮೇಲಿನ ಆರೋಪ ಸತ್ಯವಲ್ಲ

ಸಂಜೆವಾಣಿ ನ್ಯೂಸ್
ಮೈಸೂರು.ಮೇ.03:- ಮಾಜಿ ಪ್ರಧಾನಿ ಪ್ರಜ್ವಲ್ ರೇವಣ್ಣ ಅವರ ಮನೆಯಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಲೈಂಗಿಕ ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದ ಪೆನ್‍ಡ್ರೈವ್ ಹಂಚಿಕೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂಬ ಆರೋಪ ಸತ್ಯಕ್ಕೆ ದೂರ ಎಂದು ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್. ರಾಜೇಶ್ ಖಂಡಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಡನೆ ಮಾತನಾಡಿ ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಮೇಲಿನ ಆರೋಪ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ಬೇಸರ ತರಿಸುತ್ತದೆ. ಪ್ರಜ್ವಲ್ ರೇವಣ್ಣ ಮಹಿಳೆಯರ ಮಾನ ಹರಾಜು ಮಾಡಿದ್ದಾರೆ. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಕೇಂದ್ರ ಬಿಜೆಪಿ ಸರ್ಕಾರ ಇದನ್ನು ವಿರೋಧಿಸದಿರುವುದು ಮಹಿಳೆಯರ ಕಡೆಗಣನೆಯಾಗಿದೆ ಎಂದರು.
ಕುರುಬಾರಹಳ್ಳಿ ಪ್ರಕಾಶ್, ಎಸ್.ಎ. ರಹೀಂ ಹಾಜರಿದ್ದರು.