ಹಾಸಿಗೆ ಅಂಗಡಿಗೆ ಬೆಂಕಿ ಅಪಾರ ನಷ್ಟ

ಬೆಂಗಳೂರು,ಮಾ.೯-ನಗರದ ಸರ್ಜಾಪುರ ರಸ್ತೆ ದೊಡ್ಡಕನೇಲಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಅಪಾರ ನಷ್ಟ ಸಂಭವಿಸಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ದೊಡ್ಡಕನೇಲಿಯ ರಸ್ತೆಯ ಬದಿಯ ಕರ್ಲಾನ್ ಹಾಸಿಗೆ ಅಂಗಡಿಯೊಂದಕ್ಕೆ ಬೆಂಕಿ ತಗುಲಿದ್ದು ಬೆಂಕಿ ಧಗಿಸುತ್ತಿದೆ.ಆಕಾಶದೆತ್ತರಕ್ಕೆ ಹೊಗೆ ಆವರಿಸಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿ ಕೆನ್ನಾಲಿಗೆ ಪಕ್ಕದ ಶಾಪ್‌ಗಳಿಗೂ ಹರಡುತ್ತಿದ್ದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದಾಗಿ ರಸ್ತೆ ಬದಿ ಟ್ರಾಫಿಕ್ ಜಾಮ್ ಉಂಟಾಗಿದೆ. ತಕ್ಷಣಕ್ಕೆ ಯಾವುದೇ ಸಾವು ನೋವು ವರದಿಯಾಗಿಲ್ಲ. ಪೊಲೀಸರು ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದ ಜೊತೆಗೆ ಘಟನೆಗೆ ಕಾರಣ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೆಂಗಳೂರು ಸರ್ಜಾಪುರ ರಸ್ತೆಯಲ್ಲಿರುವ ಕೈಕೊಂಡ್ರ ಹಳ್ಳಿ ಬಳಿ ಕಾರ್ಲಾನ್ ಹಾಸಿಗೆ ಮಳಿಗೆಗೆ ಬೆಂಕಿ ತಗುಲಿ ಹೊತ್ತಿ ಉರಿಯುತ್ತಿರುವುದು.