ಹಾಸಿಗೆ ನೀಡಲು ನಿರಾಕರಿಸಿದರೆ ಕ್ರಮ :ಸಚಿವರ ಎಚ್ಚರಿಕೆ

ಕೆ.ಆರ್. ಪುರ,ಏ.೨೧- ತುರ್ತು ಪರಿಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗಳು ಹಾಸಿಗೆಗಳನ್ನು ನಿರಾಕರಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ದಿ ಸಚಿವ ಬಿ.ಎ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ.
ಹೂಡಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಅವರು. ಕೊರೊನಾ ಪ್ರಕರಣಗಳು ಮಹದೇವಪುರ ವಲಯದ ಬಿಬಿಎಂಪಿ ವಾರ್ಡ್ ಹಾಗೂ ಪಂಚಾಯತಿ ವ್ಯಾಪ್ತಿಗಳಲ್ಲಿ ಸುಮಾರು ೧೧ ಸಾವಿರಕ್ಕೂ ಹೆಚ್ಚಿರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸ್ಥಳೀಯ ಖಾಸಗಿ, ಸರ್ಕಾರಿ ಆಸ್ಪತ್ರೆಗಳು ಸರ್ಮಪಕವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಹತೋಟಿ ಮೀರಿ ಕೋವಿಡ್ -೧೯ ಎರಡನೇ ಹಲೆ ಹೆಚ್ಚುತ್ತಿರುವ ಕಾರಣ ಪ್ರತಿಯೊಬ್ಬ ಅಧಿಕಾರಿಗಳು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಶ್ರಮಿಸಬೇಕು, ಕೊರೊನಾ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಸ್ವಚ್ಛತೆ, ನೈರ್ಮಲ್ಯ ವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು.
ಸ್ಥಳೀಯ ಖಾಸಗಿ ಆಸ್ಪತ್ರೆಗಳು ಶೇ. ೫೦% ರಷ್ಟು ಹಾಸಿಗೆಗಳನ್ನು ಕಡ್ಡಾಯವಾಗಿ ನೀಡತಕ್ಕದ್ದು, ೧ ಹಾಸಿಗೆ ಸಹ ಕಡೆಮೆಯಾದರು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಒಟ್ಟು ೧೮೦೦ ಹಾಸಿಕೆಯನ್ನು ಸರ್ಕಾರಕ್ಕೆ ನೀಡಬೇಕೆಂದು ಆಸ್ಪತ್ರೆಯವರಲ್ಲಿ ಮನವಿ ಮಾಡಲಾಗಿದೆ ಎಂದರು.
ಸಭೆಯಗೆ ಗೈರುಹಾಜರಾದ ಆಸ್ಪತ್ರೆಗಳ ವಿರುದ್ಧ ನೋಟಿಸ್ ಜಾರಿ ಮಾಡಿ ಯಾವುದೇ ರೋಗಿಗಳು ಬಂದರು ಪ್ರಮಾಣಕವಾಗಿ ಚಿಕಿತ್ಸೆ ನೀಡಿ ಕೊರೊನಾ ವಿರುದ್ಧ ಹೋರಾಡಲು ಆಸ್ಪತ್ರೆಗಳು ಸಹಕಾರಿಸಬೇಕು, ನಿಯಮ ಉಲ್ಲಂಘನೆ ಮಾಡುವ ಆಸ್ಪತ್ರೆಗಳ ನೀರು ಹಾಗೂ ವಿದ್ಯುತ್ ಪೂರೈಕೆ ಕಡಿತ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ಮಹದೇವಪುರ ಕೋವಿಡ್ ವಲಯ ಸಂಯೋಜಕಾರಾದ ಮಂಜುಳಾ, ಡಿ.ಎಚ್.ಓ ಡಾ. ಸುರೇಂದ್ರ, ಟಿ.ಎಚ್.ಓ ಡಾ. ಚಂದ್ರಶೇಖರ್, ಮಹದೇವಪುರ ವಲಯದ ಜಂಟಿ ಆಯುಕ್ತ ವೆಂಕಟಚಲಪತಿ, ವೈಟ್ ಫೀಲ್ಡ್ ವಿಭಾಗ ಡಿಸಿಪಿ ದೇವರಾಜ್, ತಹಶೀಲ್ದಾರರ್ ಅಜಿತ್ ರೈ, ಬಿಇಓ ಹನುಮಂತರಾಯಪ್ಪ,ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ್ ಇದ್ದರು.