ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭ: ಬೆಳೆ ವಿವರಗಳನ್ನು ದಾಖಲಿಸುವಂತೆ ರೈತರಿಗೆ ಸೂಚನೆ

ಕೊಟ್ಟೂರು ಜ7: ಪ್ರಸಕ್ತ 2020-21ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯು ಈಗಾಗಲೇ ಆರಂಭವಾಗಿದ್ದು, ತಾಲೂಕಿನ ರೈತರು ಗೂಗಲ್ ಪ್ಲೇಸ್ಟೋರ್‍ನಿಂದ ಬೆಳೆ ಸಮೀಕ್ಷೆ 2020-21 ಆ್ಯಪ್ ಡೌನ್‍ಲೋಡ್ ಮಾಡಿಕೊಂಡು, ಸ್ವತಃ ರೈತರೇ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರ ಹಾಗೂ ಮಾಹಿತಿಯನ್ನು ದಾಖಲಿಸಬೇಕೆಂದು ತಾಲೂಕು ಕೃಷಿ ಅಧಿಕಾರಿ ಕೊಳ್ಳಿವಾಮದೇವ ಸಂಜೆವಾಣಿ ಪತ್ರಿಕೆಗೆ ತಿಳಿಸಿದರು.
ಈ ಬೆಳೆ ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟದ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಹಾಗೂ ಬೆಳೆ ಸಾಲ ಪಡೆಯಲು ಇದು ಅನುಕೂಲವಾಗಲಿದೆ. ತಾಲೂಕಿನ ಎಲ್ಲಾ ರೈತರ ಬೆಳೆ ವಿವರವನ್ನು ಬೆಳೆ ಸಮೀಕ್ಷೆ ಆಪ್‍ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆಯಬೇಕು.
ರೈತರು ಬೆಳೆ ವಿವರಗಳನ್ನು ದಾಖಲಿಸದಿದ್ದರೆ, ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇದೆ. ಹೀಗಾಗಿ ರೈತರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಹೇಳಿದರು.