ಹಿಂದುಳಿದ ವರ್ಗಗಳಿಂದ ಕಾಂಗ್ರೆಸ್ ಗೆ ಬೆಂಬಲ ಘೋಷಣೆಯ ನಿರ್ಣಯ

ಸಂಜೆವಾಣಿ ನ್ಯೂಸ್
ಮೈಸೂರು:ಏ.25:- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಹಾಗೂ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಅಹಿಂದ ದುಂಡು ಮೇಜಿನ ಅಧಿವೇಶನ ಮೈಸೂರಿನ ಜೆ ಎಲ್ ಬಿ ರಸ್ತೆಯಲ್ಲಿ ಇರುವ ಗುರು ರೆಸಿಡೆನ್ಸಿ ಯಲ್ಲಿ ಕಾರ್ಯಕ್ರಮ ಜರುಗಿತು.
ಅಹಿಂದ ದುಂಡು ಮೇಜಿನ ಅಧಿವೇಶನದ ಪ್ರಾಸ್ತವಿಕ ಭಾಷಣವನ್ನು ನೆರವೇರಿಸಿಕೊಟ್ಟ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ. ಎಸ್.ಶಿವರಾಮು ಮಾತನಾಡಿ ಸಂವಿಧಾನ ಹಾಗು ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕೋರಿದರು ಅಹಿಂದ ಸಂಘಟನೆಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವದ ಅಸ್ತಿತ್ವವನ್ನು ನಾವೆಲ್ಲರೂ ಕಳೆದುಕೊಳ್ಳುತ್ತೇವೆ ಹಾಗೂ ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿರುವ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನೀಚ ಬುದ್ಧಿ ಸುಳ್ಳುಗಾರನೆಂದು ತೋರಿಸಿಕೊಟ್ಟಿದ್ದಾರೆ ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಘಟನೆಗಳ ರೂವಾರಿಯಾಗಿ ಕೆಲಸ ಮಾಡುತ್ತಿರುವ ಮೋದಿಯವರಿಗೆ ತಕ್ಕ ಪಾಠವನ್ನು ಕಲಿಸಲು ಎಲ್ಲಾ ಸಂಘಟನೆಗಳಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೋರುವ ಮುಖಾಂತರ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸಲು ಹೇಳಿದರು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ಬಿಜೆಪಿ ತೊಲಗಿಸಿ ಕಾಂಗ್ರೆಸ್ ಉಳಿಸಿ ಎಂಬ ಶೀರ್ಷಿಕೆ ಅಡಿಯಲ್ಲಿ ತಮ್ಮ ನಿರ್ಣಯವನ್ನು ಸಭೆಯಲ್ಲಿ ಮಂಡಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯ್ ಕುಮಾರ್, ಪೆÇ್ರಫೆಸರ್ ಕಾಳೇಗೌಡ ನಾಗವಾರ, ದಲಿತ ಮುಖಂಡ ಹರಿಹರ ಆನಂದ ಸ್ವಾಮಿ, ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಎಫ್ ಎಂ ಕಲೀಮ್, ಕದೀರ್ ಅಹ್ಮದ್, ಮಾಜಿ ಮೇಯರ್ ನಾರಾಯಣ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ, ಎಚ್‍ಎಸ್ ಪ್ರಕಾಶ್, ಎಸ್ ಯೋಗೀಶ್, ಎಸ್ ರವೀ ನಂದನ್, ಮೊಗಣ್ಣಚಾರ್, ಎನ್ ಆರ್ ನಾಗೇಶ್, ಲೋಕೇಶ್ ಕುಮಾರ್ ಮಾದಾಪುರ ತಿಮ್ಮಯ್ಯ ಇನ್ನಿತರರು ಉಪಸ್ಥಿತರಿದ್ದರು.