ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಅಭಿವೃದ್ದಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ; ಜೂ.23 :  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಅಭಿವೃದ್ಧಿ ನಿಗಮಗಳಿಂದ ಅನುμÁ್ಠನಗೊಳಿಸಲಾಗಿರುವ 2022-23 ನೇ ಸಾಲಿನ ಸಾಲ ಸೌಲಭ್ಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 22 ರ ಗುರುವಾರ ದಾವಣಗೆರೆ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದೊಡ್ಡಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಸಹಾಯಕ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.
 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕಾಂತರಾಜ್, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಮರೇಗೌಡ ಬಯ್ಯಪುರ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಪ್ರಕಾಶ್ ಪಾಕೋಜಿ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಮುರಳೀಧರ್ ಉಪಸ್ಥಿತರಿದ್ದರು.