ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಪ್ರವಾಸ

ಕಲಬುರಗಿ,ಆ.26:ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಆಗಸ್ಟ್ 28 ಮತ್ತು 29 ರಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಬೆಂಗಳೂರಿನಿಂದ ಹಾಸನ- ಸೋಲಾಪೂರ್ ಎಕ್ಸ್‍ಪ್ರೆಸ್ ರೈಲಿನ ಮೂಲಕ ಆ.28ಕ್ಕೆ ಬೆಳಿಗ್ಗೆ 6 ಗಂಟೆಗೆ ಕಲಬುರಗಿಗೆ ಆಗಮಿಸುವ ಸಚಿವರು, ಅಂದು ಬೆಳಿಗ್ಗೆ 10.15 ಗಂಟೆಗೆ ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆಯೋಜಿಸಿರುವ “ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೇ” ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11 ಗಂಟೆಗೆ ಡಾ.ಎಸ್.ಎಂ.ರಂಗಮಂದಿರದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಅಂಗವಾಗಿ ಕಲಬುರಗಿ ವಿಭಾಗ ಮಟ್ಡದ ಸಾಹಿತಿಗಳ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು.

ಇನ್ನೂ ಮಧ್ಯಾಹ್ನ 3 ಗಂಟೆಗೆ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಚಿವರು ಕಲಬುರಗಿಯಲ್ಲಿಯೇ ವಾಸ್ತವ್ಯ ಮಾಡುವರು.

ಆಗಸ್ಟ್ 29 ರಂದು ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯ ಕೆ.ಕೆ.ಆರ್.ಡಿ.ಬಿ. ಮಂಡಳಿ ಕಚೇರಿಯಲ್ಲಿ ನಡೆಯುವ ಮಂಡಳಿ ಸಭೆಯಲ್ಲಿ ಭಾಗವಹಿಸುವ ಸಚಿವರು ಸಂಜೆ 6 ಗಂಟೆಗೆ ಇಲ್ಲಿಂದ ರಸ್ತೆ ಮಾರ್ಗವಾಗಿ ಕೊಪ್ಪಳ ಜಿಲ್ಲೆಯ ಕಾರಟಗಿಗೆ ಪ್ರಯಾಣಿಸುವರು.