ಹಿಂದುಳಿದ ವರ್ಗಗಳ ದೇವಸೂಗೂರು ಬ್ಲಾಕ್ ಅಧ್ಯಕ್ಷರಾಗಿ ಈ. ಶಿವರಾಜಗೌಡ ಅತ್ಕೂರು ಆಯ್ಕೆ

ರಾಯಚೂರು,ಏ.೧೦- ಗ್ರಾಮೀಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ದೇವಸೂಗೂರು ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಈ. ಶಿವರಾಜಗೌಡ ಅತ್ಕೂರು ಇವರನ್ನು ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ಕೆ. ಜಂಬುನಾಥ ಯಾದವ್ ಇವರು ಆಯ್ಕೆ ಮಾಡಿ ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವಂತೆ ಸೂಚಿಸಿದ್ದಾರೆ.
ರಾಯಚೂರು ಗ್ರಾಮೀಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ. ಸಣ್ಣ ನರಸಿಂಹ ನಾಯಕ ಹಾಗೂ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ. ವಿರೂಪಾಕ್ಷಿ ಇವರ ಸಮ್ಮತಿಯೊಂದಿಗೆ ಈ ಶಿವರಾಜಗೌಡ ಇವರನ್ನು ನೇಮಕ ಮಾಡಲಾಗಿದ್ದು ಗ್ರಾಮೀಣ ಕ್ಷೇತ್ರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಪರವಾಗಿ ಕೆಲಸ ಮಾಡಿ ಜನರಲ್ಲಿ ಪಂಚರತ್ನ ಯೋಜನೆಯ ಕುರಿತು ಮಾಹಿತಿ ನೀಡುವುದರ ಮೂಲಕ ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಘಟಕ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಮುಂದಾಗಬೇಕಾಗಿದೆ ಎಂದು ತಿಳಿಸಿದ್ದಾರೆ.