ಹಿಂದುಳಿದ ವರ್ಗಗಳ ಸುಧಾರಣೆಗೆ ಹೆಚ್ಚು ಅನುದಾನಕ್ಕೆ ಶಿಫಾರಸ್ಸ್

ಕೋಲಾರ, ಜ.೧೨-ರಾಜ್ಯದಲ್ಲಿ ಪಕ್ಷದ ಸಂಘಟನೆಯೊಂದಿಗೆ ಹಿಂದುಳಿದ ವರ್ಗಗಳ ಜನರಿಗೆ ಶಿಕ್ಷಣದ ಮೂಲಕ ಅವರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮ ಪಡಿಸಲು ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಭಾರತೀಯ ಜನತಾ ಪಕ್ಷದ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷರಾದ ನೆಲ್ಲ ನರೇಂದ್ರಬಾಬು ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಾದ್ಯಮದವರೊಂದಿಗೆ ಅವರು ಮಾತನಾಡುತ್ತಾ, ತಾವು ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿರಾಜ್ಯಾದ್ಯಂತ ಪ್ರವಾಸ ಕೈಗೊಂಡು ಕಾರ್ಯಕಾರಣಿ ಸಭೆಗಳ ಮೂಲಕ ಜನರ ಸಮಸ್ಯೆಗಳ ಬಗ್ಗೆ ಪರಾಮರ್ಶೆ ಮಾಡಲಾಗುತ್ತಿದೆಯೆಂದರು.ಮುಂದುವರೆದ ಯಾಂತ್ರಿಕ ಯುಗದಲ್ಲಿ ಹಿಂದುಳಿದ ವರ್ಗಗಳ ಜನರು ತಮ್ಮ ಕುಲ ಕಸಬುಗಳನ್ನು ಮುಂದುವರಿಸಿ ಜೀವನ ರೂಪಿಸಿ ಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ಏರ್ಪಟ್ಟಿದ್ದು,ಕೇವಲ ಶಿಕ್ಷಣದ ಮೂಲಕ ಮಾತ್ರ ಸಮಸ್ಯೆ ಪರಿಹರಿಸಲು ಸಾಧ್ಯ,ಇದಕ್ಕೆ ಅನುಕೂಲವಾಗುವಂತೆ ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒತ್ತು ನೀಡಲು ಸರ್ಕಾರಕ್ಕೆ ಮನುವರಿಕೆ ಮಾಡಿಕೊಡಲಾಗುವುದೆಂದರು.
ಕಾರ್ಯಕರ್ತರುನ್ನು ಜಾಗೃತಿಗೊಳಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರಲ್ಲದೆ ಮೋದಿ ಸರ್ಕಾರ ಬಂದ ಮೇಲೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ದೊರಕುವ ರೀತಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ದೊರೆಯುತ್ತಿದ್ದು,ಅದರ ಸದ್ದಬಳಕೆ ಮಾಡಿಕೊಳ್ಳ ಬೇಕೆಂದರು.
ಜಾತಿವಾರು ಅಭಿವೃದ್ಧಿ ನಿಗಮಗಳ ರಚನೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅನೇಕ ಜಾತಿಗಳು ಹಾಸ್ಟೆಲ್ ಸೌಲಭ್ಯಗಳನ್ನು ಪಡೆಯಲು ವಿಫಲವಾಗಿದ್ದು,ಅವರುಗಳ ಶಿಕ್ಷಣಕ್ಕೆ ತೊಂದರೆಯಾಗಿದೆಯೆಂದು ವಿಷಾಧಿಸಿದ ಅವರು ಅವರಿಗೆ ನ್ಯಾಯ ಒದಗಿಸಲು ಹಾಗೂ ದುರ್ಬಲರಿಗೆ ಹೆಚ್ಚಿನ ಆಸರೆ ನೀಡಲು ಬೇರೆ ಬೇರೆ ಅಭಿವೃದ್ಧಿ ನಿಗಮಗಳ ಸ್ಥಾಪನೆಗೆ ಸರ್ಕಾರ ಮುಂದಾಗಿದೆಯೆಂದು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷ ಡಾ.ವೇಣುಗೋಪಾಲ್, ಒ.ಬಿ.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸುರೇಶ್ ಬಾಬು, ಮುಖಂಡರುಗಳಾದ ಗೋವಿಂದ ನಾಯ್ಡು ಕೇಶವ ಪ್ರಸಾದ್, ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ಕೋಳಿ ನಾಗರಾಜ್, ಪ್ರಧಾನ ಕಾರ್ಯದರ್ಶಿ ಗಾಂಧಿನಗರ ಚಂದ್ರಶೇಖರ್, ಮಾಧ್ಯಮ ಪ್ರಮುಖ್ ಕೆಂಬೋಡಿ ನಾರಾಯಣಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.