ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿರಾದಾರ, ಪಾಟೀಲ ರಾಜೀನಾಮೆ

ಇಂಡಿ: ಜು.29: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯ ಪ್ರವೀಣ ನೆಟ್ಟಾರು ಅವರ ಹತ್ಯೆ ಅತ್ಯೆಂತ ಅಮಾನವೀಯ ಘಟನೆಯಾಗಿದ್ದು ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ಕೋಚಬಾಳ ಇವರಿಗೆ ರಾಜೀನಾಮೆ ನೀಡಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ತಾಲೂಕಾ ಅಧ್ಯಕ್ಷ ಅನೀಲಗೌಡ ಬಿರಾದಾರ ಮತ್ತು ಜಿಲ್ಲಾ ಕಾರ್ಯಕಾರಣಿ ಸದಸ್ಯ ಬುದ್ದುಗೌಡ ಪಾಟೀಲ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ದೇಶ ರಾಜ್ಯದಲ್ಲಿ ಇಂತಹ ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿವೆ. ರಾಜ್ಯ.ಕೇಂದ್ರದಲ್ಲಿ ಬಿಜೆಪಿ ಸರಕಾರವಿದ್ದರೂ ಕೂಡಾ ಹಿಂದೂ ಕಾರ್ಯಕರ್ತರ ಕೊಲೆಗಳು ನಡೆಯುತ್ತಿವೆ ಹೀಗಾಗಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.