ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿಗೆ ರಾಜೀನಾಮೆ

ಚಿಂಚೋಳಿ,ಜು.28- ಹಿಂದೂ ಕಾರ್ಯಕರ್ತರ ಹತ್ಯೆಯ ದುಷ್ಕರ್ಮಿಗಳ ವಿರುದ್ಧ ನಮ್ಮ ಬಿಜೆಪಿ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲಾ ಜವಾಬ್ದಾರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರದ ಅಲ್ಲಮಪ್ರಭು ಹುಲಿ ಪಾಟೀಲ್ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದು ನಮ್ಮ ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ.
ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ಪ್ರತಿ ಬಾರಿ ಹಿಂದೂ ಕಾರ್ಯಕರ್ತರುಗಳ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೆÇೀಸ್ಟ್ ಗಳಿಂದ ಏನೂ ಪ್ರಯೋಜನವಿಲ್ಲ. ನಮ್ಮ ಸರ್ಕಾರ ಹಿಂದೂ ಕಾರ್ಯಕರ್ತರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು.
ನನಗೆ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಎಲ್ಲ ಜವಾಬ್ದಾರಿ ಗಳಿಂದ ರಾಜೀನಾಮೆ ನೀಡುತ್ತೇನೆ
ಜನತೆಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಗಳು ಎಂದು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರದ ಅಲ್ಲಮಪ್ರಭು ಹುಲಿ ಪಾಟೀಲ್, ಅವರು ಪತ್ರಿಕಾ ಪ್ರಕಟ ಮೂಲಕ ತಿಳಿಸಿದ್ದಾರೆ.