ಹಿಂದೂ ಧಾರ್ಮಿಕ ದತ್ತಿ ಇಲಾಖೆ: ಅರ್ಚಕರಿಗೆ ಆಹಾರ ಕಿಟ್ ವಿತರಣೆ

ಕೊಟ್ಟೂರು ಜೂ 11: ಸರ್ಕಾರದ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ತಾಲೂಕಿನ45ದೇವಾಸ್ಥಾನಗಳ ಅರ್ಚಕರಿಗೆ ತಾಲೂಕು ಕಚೇರಿಯಲ್ಲಿ ಶಾಸಕ ಎಸ್ ಭೀಮನಾಯ್ಕಆಹಾರದ ಕಿಟ್ ವಿತರಿಸಿಮಾತನಾಡಿದ ಅವರು ಕೋವಿಡ್-19ನ ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯಸರ್ಕಾರವು ಕಠಿಣ ಲಾಕ್‍ಡೌನ್ ವಿಧಿಸಿದ್ದರಿಂದ ಎಲ್ಲಾ ದೇವಸ್ಥಾನಗಳು ಮುಚ್ಚಲಾಗಿದೆ ಆದ್ದರಿಂದ ದೇವಸ್ಥಾನಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಆರ್ಚಕ ಕುಟುಂಬಗಳಿಗೆ ಜೀವನ ಸಾಗಿಸುವುದು ಕಷ್ಟಕರವಾಗಿರುವುದನ್ನು ಮನಗಂಡು ತಾಲೂಕಿನಲ್ಲಿ ಆರ್ಚಕ ಕುಟುಂಬಗಳಿಗೆ ಕಿಟ್‍ಗಳನ್ನು ವಿತರಿಸಲಾಗುತ್ತಿದೆಂದು ತಿಳಿಸಿದರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಲಸಿದ್ದಪ್ಪಪೂಜಾರ್, ತಹಶೀಲ್ದಾರ್ ಜಿ ಅನಿಲ್ ಕುಮಾರ್ ಆಹಾರದ ಕಿಟ್ ವಿತರಿಸಿದರು.ತಾಲೂಕು ಪಂಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಕೆಂಚಪ್ಪ, ಮುಖಂಡರುಗಳಾದ ಜಿಲ್ಲಾ ಪಂಚಾಯ್ತಿ ಮಾಜಿಸದಸ್ಯ ಎಂಎಂಜೆ ಹರ್ಷವರ್ಧನ್, ಮಾಜಿ ಜಿಪಂ ಸದಸ್ಯ ದೊಡ್ಡರಾಮಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಬೂದಿ ಶಿವಕುಮಾರ್, ಸುಧಾಕರ್ ಪಾಟೀಲ್, ಪಟ್ಟಣ ಪಂಚಾಯ್ತಿ ಮುಖ್ಯಧಿಕಾರಿ ಗಿರೀಶ್ ಇದ್ದರು, ಆರ್ ಐಹಾಲಸ್ವಾಮಿ ಸೇರಿದಂತೆ ಅನೇಕ ರಿದ್ದರು