
ಸಂಜೆವಾಣಿ ವಾರ್ತೆ
ಹಿರಿಯೂರು: ಸೆ .6-ಹಿರಿಯೂರಿನ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ ನೇತೃತ್ವದಲ್ಲಿ ನಡೆಸುತ್ತಿರುವ ಹಿಂದೂ ಮಹಾ ಗಣಪತಿ ಮಂಟಪ ನಿರ್ಮಾಣ ಕಾರ್ಯಕ್ರಮಕ್ಕೆ ಗೋಪೂಜೆ ಹಾಗೂ ದ್ವಜ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ವಿಶ್ವ ಹಿಂದೂ ಪರಿಷತ್ ಭಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಪೂಜಾ ಸಮಿತಿಯ ಪದಾಧಿಕಾರಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.