ಹಿಂದೂ ಯುವ ಮುಖಂಡ ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ

ಮಂಗಳೂರು: ಪ್ರವೀಣ್‌ ಕುಮಾರ್‌ ನೆಟ್ಟೂರ್‌ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ನಡೆದಿದೆ.*
ಫಾಜೀಲ್‌ ಮೃತ ದುರ್ದೈವಿ. ಫಾಜೀಲ್‌ ಮೇಲೆ ಅಪರಿಚಿತ ತಂಡದವರು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸುರತ್ಕಲ್ ಸಮೀಪದ ಮಂಗಳಪಾದೆ ನಿವಾಸಿ ಫಾಜೀಲ್ ಗಂಭೀರ ಗಾಯಗೊಂಡ ಫಾಜೀಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

*ಘಟನೆಗೆ ಸಂಬಂಧಿಸಿ ಸುರತ್ಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್ ನಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ.