ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ

ಬೆಂಗಳೂರು,ನ.೧೨-ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ. ಮತ್ತೆ ಆತನ ಮೇಲೆ ಹರಿದ ಕ್ಯಾಂಟರ್ ವಾಹನ. ಕಲ್ಯಾಣ ನಗರ ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಈ ದೃಶ್ಯಗಳು ಸಿಸಿ ಟಿವಿಯಲ್ಲಿ ದಾಖಲಾಗಿದೆ.
ಈ ಭೀಕರ ಅಪಘಾತಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದವನ ಮೇಲೆ ಮತ್ತೆ ಕ್ಯಾಂಟರ್ ಹರಿದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕಲ್ಯಾಣ ನಗರ ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ರಸ್ತೆಯಲ್ಲಿ ಬಿದ್ದ ವ್ಯಕ್ತಿ ಮೇಲೆ ಹರಿದ ಕ್ಯಾಂಟರ್ ವಾಹನ ಮೃತನನ್ನು ಬಾಪಿ ಕಮಾರ್ ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದರು. ಬಳಿಕ ಕ್ಯಾಂಟರ್ ವಾಹನ ಮತ್ತೆ ಈತನ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಘಟನೆಯ ದೃಶ್ಯದ ಹಿಂದೆ ಬರುತ್ತಿದ್ದ ಕಾರಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಕುರಿತು ಬಾಣಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಟ್ ಅಂಡ್ ರನ್ ಕೇಸ್ ದಾಖಲಿಸಿಕೊಂಡ ಪೊಲೀಸರು ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.