
ಕಲಬುರಗಿ:ಎ.17: ಮಾನವನ ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಸುಮಾರು 13 ರಕ್ತ ಹೆಪ್ಪುಗಟ್ಟುವ ಅಂಶಗಳು ಅಥವಾ ಘಟಕಗಳು ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡುತ್ತಿರುತ್ತವೆ. ಈ ಘಟಕಗಳಲ್ಲಿ ಯಾವುದಾದರೊಂದು ಘಟಕ ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ರಕ್ತ ಹೆಪ್ಪುಗಟ್ಟುವ ಪ್ರಕ್ರಿಯೆಗೆ ಅಡ್ಡಿಯಾಗುವುದೇ ಹಿಮೋಫಿಲಿಯಾ ರೋಗವಾಗಿದ್ದು, ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಸಲಹೆ ನೀಡಿದರು.
ನಗರದ ಶೇಖರೋಜಾದಲ್ಲಿರುವ ಶಹಾಬಜಾರನ 'ನಗರ ಪ್ರಾಥಮಿಕ ಆರೋಗ್ಯ ಕೇಂದ'್ರದಲ್ಲಿ 'ಬಸವೇಶ್ವರ ಸಮಾಜ ಸೇವಾ ಬಳಗ'ದ ಸಹಯೋಗದೊಂದಿಗೆ ಸೋಮವಾರ ಏರ್ಪಡಿಸಲಾಗಿದ್ದ 'ವಿಶ್ವ ಹಿಮೋಫಿಲಿಯಾ ಜಾಗೃತಿ ದಿನಾಚರಣೆ'ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಹಿಮೋಫಿಲಿಯಾದಲ್ಲಿ ಎ.ಬಿ.ಸಿ ಎಂಬ ಮೂರು ವಿಧಗಳಿವೆ. ಪುರುಷರಲ್ಲಿ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ. ತಾಯಿಯಿಂದ ಮಗನಿಗೆ ಬಳವಳಿಯಾಗಿ ಬರುವ ಕಾಯಿಲೆ ಇದಾಗಿದೆ. ಗಂಟು, ಕೀಲು, ಸ್ನಾಯು ಮತ್ತು ಮೌಂಸಖಂಡಗಳಲಿ ರಕ್ತಸ್ರಾವ, ಮೂಗಿನಲ್ಲಿ ರಕ್ತಸ್ರಾವ, ಹಲ್ಲಿನ ವಸಡಿಯಲ್ಲಿ ರಕ್ತಸ್ರಾವ, ಸಂಧುನೋವು, ಊತ, ಕೆಲವರಿಗೆ ಮಲ-ಮೂತ್ರದಲ್ಲಿ ರಕ್ರಸ್ರಾವ, ಮಿದುಳಿನ ರಕ್ತಸ್ರಾವ ಇವುಗಳು ಹಿಮೋಫಿಲಿಯಾ ಕಾಯಿಲೆಯ ಲಕ್ಷಣಗಳಾಗಿದ್ದು, ಇವುಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ, ತಕ್ಷಣ ತಜ್ಞ ವೈದ್ಯರನ್ನು ಭೇಟಿಯಾಗಿ ಪರೀಕ್ಷಿಸಿ, ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಲು ಸಾಧ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ಪ್ರಮುಖರಾದ ಶಿವಯೋಗಪ್ಪ ಬಿರಾದಾರ, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ನಾಗೇಶ್ವರಿ ಮುಗಳಿವಾಡಿ, ಮಂಗಲಾ ಚಂದಾಪುರೆ, ಅರ್ಚನಾ ಸಿಂಗೆ, ಜಗನಾಥ ಗುತ್ತೇದಾರ, ಗುರುರಾಜ ಕೈನೂರ್, ಲಕ್ಷ್ಮೀಕಾಂತ ಹಂಗರಗಿ ಸೇರಿದಂತೆ ಇನ್ನಿತರರು ಇದ್ದರು.