ಹಿರಿಯರಿಗೆ ಮಂತ್ರಿ ಸ್ಥಾನ

ಬೆಂಗಳೂರು, ಮೇ. ೨೦:ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ, ಹೈಕಮಾಂಡ್ ಹಿರಿತನ ನೋಡಿ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿದೆ ಎಂದು ನೂತನ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಹೈಕಮಾಂಡ್ ಎಲ್ಲವನ್ನೂ ಅಳೆದು-ತೂಗಿ ಸಚಿವ ಸ್ಥಾನ ನೀಡಿದೆ. ಇದೇ ಖಾತೆ ಬೇಕು ಎಂದು ನಾನು ಬೇಡಿಕೆ ಇಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಖಾತೆ ಕೊಡುತ್ತಾರೋ ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದರು.
ಲಿಂಗಾಯತರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗದ ಬಗ್ಗೆ ಪ್ರತಿಕ್ರಿಯಿಸಿದ ಅವರು ಈ ಚುನಾವಣೆಯಲ್ಲಿ ದಲಿತರು, ಮುಸ್ಲಿಮರು ಲಿಂಗಾಯತರು ಅತೀ ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ. ಹೀಗಿರುವಾಗ ಸಮುದಾಯದ ನಿರೀಕ್ಷೆಗಳು ಸಹಜ. ಮುಂದಿನ ದಿನಗಳಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾವು ಈಗ ಜನರಿಗೆ ನೀಡಿರುವ ಭರವಸೆಯತ್ತ ಗಮನ ಕೇಂದ್ರೀಕರಿಸುತ್ತೇವೆ, ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದರು.