
ಸಂಜೆವಾಣಿ ವಾರ್ತೆ
ಹಿರಿಯೂರು ಸೆ.6- ಹಿರಿಯೂರಿನ ಸುಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವ ದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ವೈಭವದ ಮೆರವಣಿಗೆ ನಡೆಯಿತು. ಮೆರವಣಿಗೆ ಸಾಗಿ ಬಂದ ದಾರಿಯಲ್ಲಿ ಭಕ್ತರ ಮನೆಗಳಲ್ಲಿ ಗುರುರಾಯರಿಗೆ ಪೂಜೆ ಸಮರ್ಪಿಸಿದರು. ದಾರಿ ಯುದ್ದಕ್ಕೂ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.