ಹಿರಿಯ ನಾಗರಿಕರ ಪ್ರತಿಭಟನೆ


ಹುಬ್ಬಳ್ಳಿ,ಮಾ.4: ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಸಹಾಯಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಹಿರಿಯ ನಾಗರಿಕರು ಪ್ರತಿಭಟನಾ ಧರಣಿ ನಡೆಸಿದರು.
ನಗರದ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ನಿವೃತ್ತಿ ನೌಕರರ ಮತ್ತು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಹಿರಿಯ ನಾಗರಿಕರು, ಮೌನವಾಗಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಹಿರಿಯ ನಾಗರಿಕರು ಕಾನೂನು ಬದ್ದವಾಗಿ ರಾಷ್ಟ್ರದ ಸಂಪತ್ತು ಎಂದು ಘೋಷಣೆ ಮಾಡಬೇಕು, ಆರ್ಥಿಕವಾಗಿ ದುರ್ಬಲರಾದ ಇಪಿಎಫ್ ನಿವೃತ್ತ ನೌಕರರು, ಕಾರ್ಮಿಕ ಕೂಲಿಕಾರರು ಹಾಗೂ ವೃದ್ದಾಪ್ಯವೇತನ ಪಡೆಯುತ್ತಿರುವವರಿಗೆ ಪ್ರತಿ ತಿಂಗಳು ಹತ್ತು ಸಾವಿರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದರು.
ಎಲ್ಲ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಚಿಕಿತ್ಸಾ ವೆಚ್ಚ, ಇನ್ಸೂರೆನ್ಸ್ ಸೌಲಭ್ಯ, ರಾಷ್ಟ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ (ಮಂತ್ರಾಲಯ) ಇಲಾಖೆ ಸ್ಥಾಪನೆ ಮಾಡುವುದು, ಎಲ್ಲ ಪೆÇೀಲಿಸ್ ಪೆÇೀಲಿಸ್ ಠಾಣೆಯಲ್ಲಿ ಹಿರಿಯ ನಾಗರಿಕರ ಸಮಿತಿ ರಚಿಸಿ ಹಿರಿಯ ನಾಗರಿಕರ ಮೇಲಾಗುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಹಶಿಲ್ದಾರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆರ್.ಕೆ.ಮಠದ, ಎಂ.ಬಿ.ಪಾಟೀಲ್, ವಿಜಯ ದೇಶಮುಖ, ಬಿ.ಎ.ಪಾಟೀಲ್, ಸುನಂದಾ ಬೆನ್ನೂರ ಮುಂತಾದವರು ಉಪಸ್ಥಿತರಿದ್ದರು.