ಹಿರೇಕಾಸನಕಂಡಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ

ಕೊಪ್ಪಳ ಏ 17 : ತಾಲೂಕಿನ ಹಿರೇಕಾಸನಕಂಡಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ 46 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಪೈಪ್ಲೈನ್ ಕಾಮಗಾರಿ ಸರಿಯಾಗಿ ಆಗಿಲ್ಲ ಈ ಕುರಿತು ಸಂಬಂಧಿಸಿದ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಎಂದು ರಾಜ್ಯ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಸಿ ಪಾಟೀಲ್ ಹೇಳಿದ್ದಾರೆ
ಶುಕ್ರವಾರದಂದು ಕೊಪ್ಪಳ ತಾಲೂಕಿನ ಹಿರೇಕಾಸನಕಂಡಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಬಹುಗ್ರಾಮ ಕುಡಿಯುವ ನೀರು ಯೋಜನೆ ಗಿಣಿಗೇರಾ ದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಹಾಗೂ ಬಹದ್ದೂರ್ ಬಂಡಿ ಗ್ರಾಮದಲ್ಲಿನ ನವಲ್ಕಲ್ ಏತ ನೀರಾವರಿ ಯೋಜನೆ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು