
ಧಾರವಾಡ, ಮಾ.16: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅವಳಿ ನಗರ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಅನಧಿಕೃತ ಲೇಔಟ್‍ಗಳ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ಹುಡಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ. ಸಂತೋಷಕುಮಾರ ಬಿರಾದಾರ ಅವರು ಅನಧಿಕೃತ ಬಡಾವಣೆಗಳ ಸಮೀಕ್ಷೆ ಕೈಗೊಂಡಿದ್ದು, ಹಂತ ಹಂತವಾಗಿ ಅವುಗಳ ತೆರವು ಕಾರ್ಯಾಚರಣೆಯನ್ನು ಈಗಾಗಲೇ ಆರಂಭಿಸಿದ್ದಾರೆ.
ಇಂದು ಹುಬ್ಬಳ್ಳಿ ತಾಲೂಕಿನ ತಿಮ್ಮಸಾಗರ ಗ್ರಾಮ ವ್ಯಾಪ್ತಿಯ ಅನಧಿಕೃತ ಲೇಔಟ್‍ನ್ನು ತೆರವುಗೊಳಿಸಲಾಯಿತು.
ಈಗಾಗಲೇ ಸಮೀಕ್ಷೆಯಲ್ಲಿ ಗುರುತಿಸಿರುವ ಅನಧಿಕೃತ ಲೇಔಟ್‍ಗಳ ತೆರವು ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲೂ ಮುಂದುವರೆಸಲಾಗುವುದು. ಸಾರ್ವಜನಿಕರು ಅನುಮತಿ ಇಲ್ಲದೆ ನಿರ್ಮಿಸುವ ಅನಧಿಕೃತ ಲೇಔಟ್‍ಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಮತ್ತು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅಗತ್ಯ ಅನುಮತಿ ಪಡೆಯದೇ ನಿರ್ಮಿಸುವ ಲೇಔಟ್‍ಗಳಲ್ಲಿ ಸಾರ್ವಜನಿಕರು ಸೈಟ್‍ಗಳನ್ನು ಖರೀದಿಸಬಾರದೆಂದು ಹುಡಾ ಆಯುಕ್ತ ಡಾ. ಸಂತೋಷಕುಮಾರ ಬಿರಾದಾರ ತಿಳಿಸಿದ್ದಾರೆ.