ಹುಬ್ಬಳ್ಳಿ: ನೇಣಿಗೆ ಶರಣಾದ ಪೊಲೀಸ್ ಕಾನ್ಸ್‍ಟೇಬಲ್

ಹುಬ್ಬಳ್ಳಿ, ಜು 13: ಪೆÇಲೀಸ್ ಪೇದೆಯೋರ್ವರು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ತಡರಾತ್ರಿ ನಗರದ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.

ಬೆಂಡಿಗೇರಿ ಪೆÇಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ ಎಂಬುವವರೇ ತಾವು ವಾಸವಿರುವ ಸ್ಥಳದಲ್ಲಿ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ.

ಮಲ್ಲಿಕಾರ್ಜುನ ಅವರ ಆತ್ಮಹತ್ಯೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ಈ ಕುರಿತಂತೆ ಬೆಂಡಿಗೇರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆದಿದೆ.