ಹುಬ್ಬಳ್ಳಿ-ಪುಣೆ ನಡುವೆ ವಿಮಾನ ಸಂಚಾರ ಪುನಾರಂಭ

ಹುಬ್ಬಳ್ಳಿ,ಜ.೧೭-ಕೇಂದ್ರ ಸಚಿವ ಪ್ರಹ್ಲಾದ್ ಅವರು ಹುಬ್ಬಳ್ಳಿ-ಪುಣೆ ನಡುವೆ ಸ್ಥಗಿತಗೊಂಡಿದ್ದ ವಿಮಾನ ಸೇವೆ ಪುನರಾರಂಭಗೊಂಡಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಸಚಿವರು, ನನ್ನ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಾರ್ಗದಲ್ಲಿ ಸಂಚರಿಸುವ ವಿಮಾನಗಳು ಫೆಬ್ರವರಿ ೨ ರಿಂದ ವಾರಕ್ಕೆ ೪ ವಿಮಾನಗಳು ನಿರಂತರವಾಗಿ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ತಮ್ಮ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸಲು ಸಹಕಾರ ನೀಡಿದ ಇಂಡಿಗೋದ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.