
(ಸಂಜೆವಾಣಿ ವಾರ್ತೆ)
ಹುಮನಾಬಾದ್: ಮೇ.15:ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಹುಮನಾಬಾದ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ನೂತನ ಶಾಸಕ ಡಾ. ಸಿದ್ದು ಪಾಟೀಲ್ ಹೇಳಿದರು. ಪಟ್ಟಣದ ಬಿಜೆಪಿ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾಂಗ್ರೆಸ್ ದುರಾಡಳಿತ ನೀತಿ ಸಹಿಸದ ಜನರು ಬಿಜೆಪಿ ಅವಕಾಶ ನೀಡಿದ್ದಾರೆ. ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಂದು ಭರವಸೆ ನೀಡಿದರು.
ಕ್ಷೇತ್ರದಲ್ಲಿ ಬಡಜನರಿಗೆ ಉತ್ತಮ
ಆರೋಗ್ಯ ಸೇವೆ, ಗುಣಮಟ್ಟದ ಶಿಕ್ಷಣ, ಕೃಷಿ ಚಟುವಟಿಕೆಗೆ ಪೂರಕವಾದ ನೀರಾವರಿ ಯೋಜನೆಗಳು ಸೇರಿದಂತೆ ಅನೇಕ ಯೋಜನೆಗಳನ್ನು ಹುಮನಾ ಬಾದ್ ಕ್ಷೇತ್ರದಲ್ಲಿ ಅನುಷ್ಠಾನ ಮಾಡಲಾಗುವುದು.ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪುರಸಭೆ ಸದಸ್ಯ ರಮೇಶ ಕಲ್ಲೂರ್, ಬಿಜೆಪಿ ಮಂಡಲ ಅಧ್ಯಕ್ಷ ಪ್ರಭಾಕರ ನಾಗರಾಳೆ, ಮುಖಂಡರಾದ ಮಲ್ಲಿಕಾರ್ಜುನ್ ಕುಂಬಾರ, ಸಂತೋಷ ಪಾಟೀಲ್, ನಾಗಭೂಷಣ ಸಂಗಮ , ಶ್ರೀನಾಥ್ ದೇವಣಿ ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.