
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಿಂಧೂರ ವೀರ ಲಕ್ಷ್ಮಣ ನಾಯಕ ಜೀವನಾಧರಿತ ” ಹುಲಿ ನಾಯಕ” ಚಿತ್ರದ ಪಸ್ಟ್ ಲುಕ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಯುವ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
ಇದೇ ವೇಳೆ ನಟಿಯರಾದ ಜ್ಞಾನ ಪ್ರಕಾಶ್ ಸ್ವಾಮೀಜಿ, ಅನಿತಾ ಭಟ್, ಪೂಜಾ ಗಾಂಧಿ, ಸಂಜನಾ ಗಲ್ರಾಣಿ , ಕೃಷಿ ಸಚಿವ ಚಲುವರಾಯ ಸ್ವಾಮಿ ,ನಟರಾದ ವಸಿಷ್ಠ ಸಿಂಹ, ಡಾಲಿ ಧನಂಜಯ ಸೇರಿದಂತೆ ಅನೇಕರು ಈ ಕ್ಷಣಕ್ಕೆ ಸಾಕ್ಷಿಯಾದರು.
ಡಿಜೆ ಚಕ್ರವರ್ತಿ ಆಕ್ಷನ್ ಕಟ್ ಹೇಳಲು ಮುಂದಾಗಿರುವ ಚಿತ್ರಕ್ಕೆ ನಿರ್ಮಾಪಕ ಡಿ. ಮಂಜುನಾಥ್ ಬಂಡವಾಳ ಹಾಕುತ್ತಿದ್ದಾರೆ. ಅವರು ಮಾತನಾಡಿ. ” ಅನ್ ಲಾಕ್ ರಾಘವ” ಚಿತ್ರದ ತೆರೆಗೆ ಬಂದ ಬಳಿಕ ಎಲ್ಲಾ ಅಂದುಕೊಂಡಂತೆ ಆದರೆ ಡಿಸೆಂಬರ್ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ. ಒಳ್ಳೆಯ ಕಥೆಯನ್ನು ನಿರ್ದೇಶಕರು ಮಾಡಿಕೊಂಡಿದ್ದಾರೆ. ಮಗ ಮಿಲಿಂದ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಹಕಾರವಿರಲಿ ಎಂದು ಕೇಳಿಕೊಂಡರು.
ನಿರ್ದೇಶಕ ಚಕ್ರವರ್ತಿ. ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ನೀಡುತ್ತೇನೆ ಎಂದರು. ನಾಯಕ ಮಿಲಿಂದ್ ಗೌತಮ್, ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಸರ್ ಅವರಿಗೆ ಆಭಾರಿ ಚಿತ್ರದಲ್ಲಿ ವೀರನ ಪಾತ್ರ ಮಾಡುತ್ತಿದ್ದೇನೆ. ಉತ್ತಮ ಕಥೆ ಆಯ್ಕೆ ಮಾಡಿಕೊಂಡಿರುವ ಚಕ್ರವರ್ತಿ ಅವರಿಗೆ ಧನ್ಯವಾದ ಎಂದರು. ಇದೇ ಸಂದರ್ಭದಲ್ಲಿ ಸಿಂಧೂರ ನಾಯಕ ಕುಟುಂಬದ ಸದಸ್ಯರು ಮತ್ತು ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ ಅವರನ್ನು ಸನ್ಮಾನಿಸಲಾಯಿತು.
ಚಾಲನೆ
ನಟ ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ “ವೃಕ್ಷದೀಪ” ಅಭಿಯಾನಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.ಐದು ಲಕ್ಷಕ್ಕೂ ಅಧಿಕ ಸಸಿ ನೀಡುವ ಉದ್ದೇಶ ಹೊಂದಲಾಗಿದೆ