ಹುಲಿಯೂರುದುರ್ಗ ಪಿಎಸ್‌ಐ ವೆಂಕಟೇಶ್‌ಗೆ ಸಿಎಂ ಪದಕ

ಕುಣಿಗಲ್, ಮಾ. ೨೭- ತಾಲ್ಲೂಕಿನ ಹುಲಿಯೂರುದುರ್ಗ ಪೋಲಿಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಟಿ. ವೆಂಕಟೇಶ್ ಅವರ ಕರ್ತವ್ಯ ನಿಷ್ಠೆಗೆ ಮುಖ್ಯಮಂತ್ರಿ ಪದಕ ಲಭಿಸಿದೆ.
ತಾಲ್ಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಸಬ್ ಇನ್ಸ್‌ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಟಿ. ವೆಂಕಟೇಶ್ ರವರಿಗೆ ಮುಖ್ಯಮಂತ್ರಿಗಳ ಪದಕ ಲಭಿಸಿದ್ದು, ಇವರು ೧೬ ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನಂತರ ಪೊಲೀಸ್ ಇಲಾಖೆಗೆ ಸೇರಿ ಯಶವಂತಪುರ, ಚಿಕ್ಕಬಳ್ಳಾಪುರ, ಮಾಗಡಿ ಹಾಗೂ ಇದೀಗ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಅವರ ಪ್ರಾಮಾಣಿಕತೆ ನಿಷ್ಠೆ ಸೇವಾ ಮನೋಭಾವವನ್ನು ರೂಢಿಸಿಕೊಂಡು ಬಡವರು, ಶೋಷಿತರು, ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಇವರ ಕರ್ತವ್ಯ ನಿಷ್ಠೆಗೆ ಹೆಸರು ಗಳಿಸಿದ್ದು, ಯಾವುದೇ ರಾಜಕೀಯ ಒತ್ತಡ ಆಡಳಿತದಲ್ಲಿ ಹಸ್ತಕ್ಷೇಪ ಸಹಿಸದೆ ಕರ್ತವ್ಯವನ್ನು ನಿರ್ವಹಿಸುವ ಇವರ ಸೇವೆಯನ್ನು ಸರ್ಕಾರ ಗುರುತಿಸಿ ಮುಖ್ಯಮಂತ್ರಿಗಳ ಸೇವಾ ಪದಕವನ್ನು ನೀಡಿ ಗೌರವಿಸಲಿದೆ.
ಏಪ್ರಿಲ್ ೨ ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವೆಂಕಟೇಶ್ ಅವರು ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಕೊಪ್ಪ ಗ್ರಾಮದ ತಿಮ್ಮೇಗೌಡ ಕೆಂಪಮ್ಮ ಸುಪುತ್ರರಾಗಿ ಜನಿಸಿದ್ದು, ಇವರ ಸೇವೆಗೆ ಲಭಿಸಿದ ಪ್ರಶಸ್ತಿ ಪ್ರದಾನವಾಗಿದೆ ಎಂದು ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿಗಳಾದ ನಿಡಸಾಲೆ ಜೆ.ಡಿ. ಗಂಗಾಧರ್ ಸೇರಿದಂತೆ ಅನೇಕ ಅಭಿಮಾನಿಗಳು ಅಭಿನಂದಿಸಿದ್ದಾರೆ.