ಹೂಳು ತೆಗೆಯುವ ಕಾಮಗಾರಿಗೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ

ಗಂಗಾವತಿ ಏ‌04: ಗಂಗಾವತಿ ವಿಧಾನ ಸಭಾ ಕ್ಷೇತ್ರ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಹಿರೇಹಳ್ಳ ಜಲಾಶಯದ ಹೂಳು ತೆಗೆಯುವ ಕಾಮಗಾರಿಗೆ ಶಾಸಕ ಪರಣ್ಣ ಮುನವಳ್ಳಿ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಈ ಕಾಮಗಾರಿಗೆ
ಸಂಸದ ಸಂಗಣ್ಣ ಕರಡಿ ಹಾಗೂ ತಾವು ನಿರಂತರ ಪ್ರತಿಫಲದಿಂದ ರಾಜ್ಯ ಜಲ ಸಂಪನ್ಮೂಲ ಇಲಾಖೆಯಡಿ 4 ಕೋಟಿ 27 ಲಕ್ಷ ರೂ‌.ಅನುದಾನ ಬಿಡುಗಡೆಯಾಗಿದೆ ಎಂದರು.
ಹಿರೇಹಳ್ಳ ಜಲಾಶಯದಲ್ಲಿ 4 ಲಕ್ಷ 76 ಸಾವಿರ ಕ್ಯೂಬಿಕ್ ಮೀಟರಿನಷ್ಟು ಮಣ್ಣನ್ನು ತೆಗೆಯುವುದರಿಂದ ನೀರಿನ ಸಾಮರ್ಥ್ಯ ಹೆಚ್ಚಾಗಲಿದ್ದು, ಈ ಭಾಗದ ಸಾವಿರಾರು ರೈತರಿಗೆ ಇದರ ಸದುಪಯೋಗ ಆಗಲಿ ಎನ್ನುವ ಉದ್ದೇಶದಿಂದ, ಇಂತಹ ಮಹತ್ತರವಾದ ಯೋಜನೆಯನ್ನು ಈ ಕ್ಷೇತ್ರಕ್ಕೆ ಬರಲು ಸಾಧ್ಯವಾಗಿದೆ, ಮುಂದಿನ ದಿನಮಾನಗಳಲ್ಲಿ ಗಾರ್ಡನ್ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರ ನಿಗಮದ ಅಧ್ಯಕ್ಷ ತಿಪ್ಪೇರುದ್ರ ಸ್ವಾಮಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಿಗೆ, ಜಿಲ್ಲಾ ಪಂಚಾಯತ್ ಸದಸ್ಯರಾದ ಗವಿಸಿದ್ದಪ್ಪ ಕರಡಿ, ಬಿಜೆಪಿ ಮುಖಂಡರಾದ ಮಂಜುನಾಥ ಸಿರಿಗೇರಿ ಉದಯ ಚಿತ್ರಗಾರ ವಿರುಪಾಕ್ಷಪ್ಪ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಉಪಸ್ಥಿತರಿದ್ದರು