
ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಮಾ.06: ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತದಿಂದ ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು.
ಸಾನಿಧ್ಯ ವಹಿಸಿದ್ದ ಗವಿಮಠದ ಡಾ. ಹಿರಿಶಾಂತವೀರ ಸ್ವಾಮೀಜಿ ಮಾತನಾಡಿ, ಆದರ್ಶ ತತ್ವಗಳನ್ನು ಬೋಧಿಸಿದ ರೇಣುಕಾಚಾರ್ಯರ ಜಯಂತಿಯನ್ನು ಸರ್ಕಾರದಿಂದ ಆಚರಿಸುತ್ತಿರುವುದು ಶ್ಲಾಘನೀಯ. ಶರಣರು, ದಾರ್ಶನಿಕರ ಚಿಂತನೆಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ರೇಣುಕಾಚಾರ್ಯರ ಭಾವಚಿತ್ರಕ್ಕೆ ತಹಶೀಲ್ದಾರ್ ಕೆ.ಶರಣಮ್ಮ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೀರಶೈವ ಮಹಾಸಭಾ ಅಧ್ಯಕ್ಷ ಅಟವಾಳಗಿ ಕೊಟ್ರೇಶ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಪಿ.ಎಂ.ಅಶೋಕ, ಎ.ಎಂ.ಪಿ.ವಾಗೀಶ, ಕೆ.ಎಂ.ವಿಶ್ವಾರಾಧ್ಯ, ಚನ್ನಬಸಯ್ಯ, ಕೊಟ್ರಯ್ಯ, ಪಕ್ಕೀರಯ್ಯ, ಹಕ್ಕಂಡಿ ಶಿವನಾಗಪ್ಪ ಹಾಗೂ ಜಂಗಮ ಸಮಾಜದ ಹಿರಿಯರು ಭಾಗವಹಿಸಿದ್ದರು.