ಹೂವಿನಹಡಗಲಿ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಹನುಮಂತಪ್ಪ ಆಯ್ಕೆ

ಹೂವಿನಹಡಗಲಿ ನ 18 : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಅಧ್ಯಕ್ಷರಾಗಿ ಬಿ.ಹನುಮಂತಪ್ಪ, ಉಪಾಧ್ಯಕ್ಷರಾಗಿ ನಾಗರಾಜನಾಯ್ಕ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ವಿಶ್ವಜಿತ್ ಮೆಹತಾ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಗೋಳ ಚಿದಾನಂದ, ಎಂ.ಪರಮೇಶ್ವರಪ್ಪ, ಸಂಘದ ನಿರ್ದೇಶಕರಾದ ಬಸವನಗೌಡ ಪಾಟೀಲ್, ಗುಡೇಕೋಟಿ ಸೋಮಶೇಖರ ಸ್ವಾಮಿ, ದೀಪದ ಕೃಷ್ಣಪ್ಪ, ಈಟಿ ಹನುಮೇಶ, ಟಿ.ಮಹಾಂತೇಶ, ಎಚ್.ಮಂಜುನಾಥ, ಜೆ.ಢಾಕ್ಯಾನಾಯ್ಕ, ಮಲ್ಕಿಒಡೆಯರ್ ಸುರೇಶ, ಎ.ಜೆ.ವೀರೇಶ ಇತರರು ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.