ಹೂವಿನಹಡಗಲಿ ಬಸ್ ನಿಲ್ದಾಣದಲ್ಲಿ ಮತ ಜಾಗೃತಿ


ಸಂಜೆವಾಣಿ ವಾರ್ತೆ
ಹೂವಿನಹಡಗಲಿ: ಪಟ್ಟಣದ ಬಸ್ ನಿಲ್ದಾಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಬಸ್ ನಿಲ್ದಾಣದಲ್ಲಿನ ಪ್ರಯಾಣಿಕರು, ಚಾಲಕ, ನಿರ್ವಾಹಕ ಹಾಗೂ ಸಿಬ್ಬಂದಿಗೆ ಮತದಾನದ ಅರಿವು ಮೂಡಿಸಲಾಯಿತು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಮಲ್ಲಿಕಾರ್ಜುನ, ಶಿಕ್ಷಕ ಬನ್ನೆಪ್ಪ, ನೋಡಲ್ ಅಧಿಕಾರಿ ಎಚ್.ಮಲ್ಲಿಕಾರ್ಜುನ ಮಾತನಾಡಿ,
ಮೇ 7 ರಂದು ಜರುಗಲಿರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಯೋಗ್ಯ ವ್ಯಕ್ತಿಗೆ ನೈತಿಕ ಮತ ಚಲಾಯಿಸಬೇಕು. ನಿರ್ಭೀತಿಯಿಂದ ಮತ ಚಲಾಯಿಸಿ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಪೂಜಾರ , ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

One attachment • Scanned by Gmail